ಡಿಜೆ ಹಳ್ಳಿ ಸಿದ್ದರಾಮಯ್ಯ ಭೇಟಿ: ಅಪರಾಧಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಆಗ್ರಹ
ರಾಜ್ಯ

ಡಿಜೆ ಹಳ್ಳಿ ಸಿದ್ದರಾಮಯ್ಯ ಭೇಟಿ: ಅಪರಾಧಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಆಗ್ರಹ

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ ನಡೆದಾಗ ವಿಪಕ್ಷ ನಾಯಕ ಸಿದ್ಧರಾಮಯ್ಯ ಕರೋನಾ ಸೋಂಕಿನ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕ್ವಾರಂಟೈನ್‌ ಅವಧಿ ಮುಗಿಸಿ ಇದೀಗ ಗಲಭೆಗೆ ತುತ್ತಾದ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

ಪ್ರತಿಧ್ವನಿ ವರದಿ

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಘಟನಾಸ್ಥಳಕ್ಕೆ ಭೇಟಿ ನೀಡಿದ ಸಿದ್ಧರಾಮಯ್ಯ, ಈ ಕುರಿತು ಟ್ವೀಟ್‌ ಮಾಡಿದ್ದು, ಡಿ.ಜೆ ಹಳ್ಳಿಯಲ್ಲಿ ಗಲಭೆ ನಡೆದ ಸಂದರ್ಭದಲ್ಲಿ ನಾನು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ, ಸೋಂಕಿನಿಂದ ಗುಣಮುಖನಾದ ನಂತರ ಕೆಲವು ದಿನಗಳ ಕಾಲ ಹೋಂ ಕ್ವಾರೆಂಟೈನ್‌ಗೂ ಒಳಗಾಗಿದ್ದೆ. ಈ ಎಲ್ಲಾ ಕಾರಣಗಳಿಂದಾಗಿ ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ ಎಂದಿದ್ದಾರೆ.

ಒಂದು ವೇಳೆ ಪ್ರವಾದಿ ಮಹಮದ್ ಅವರ ವಿರುದ್ಧ ನಿಂದನಾತ್ಮಕ ಬರಹ ಪ್ರಕಟಿಸಿದ ನವೀನ್‌ನ ಶೀಘ್ರ ಬಂಧನವಾಗಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿರಲಿಲ್ಲವೇನೊ. ಗಲಭೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ಗಲಭೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದ್ದಾರೆ.

ನೈಜ ಅಪರಾಧಿಗಳು ಯಾರೇ ಆಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಅದೇ ವೇಳೆ ಪ್ರಕರಣದಲ್ಲಿ ಭಾಗಿಯಾಗದ ಹಲವರು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಯಾರ ವಿರುದ್ಧ ಸೂಕ್ತ ಸಾಕ್ಷ್ಯಗಳಿಲ್ಲ, ಯಾರು ನಿರಪರಾಧಿಗಳಿದ್ದಾರೆ ಅಂಥವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ

ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿದ್ದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಪೊಲೀಸ್ ಠಾಣೆಗೆ ಭೇಟಿನೀಡಿ, ಡಿಸಿಪಿ ಶರಣಪ್ಪ ಅವರಿಂದ ಘಟನೆಯ ಮಾಹಿತಿ ಪಡೆದುಕೊಂಡ ಸಿದ್ದರಾಮಯ್ಯ ಅವರಿಗೆ ಶಿವಾಜಿನಗರ ಶಾಸಕ ಅರ್ಷದ್ ರಿಝ್ವಾನ್‌ , ವೆಂಕಟರಮಣಪ್ಪ ಮೊದಲಾದವರು ಜೊತೆ ನೀಡಿದ್ದರು.

Click here to follow us on Facebook , Twitter, YouTube, Telegram

Pratidhvani
www.pratidhvani.com