ರಾಜ್ಯ
ಕೋವಿಡ್-19: ರಾಜ್ಯದಲ್ಲಿ 99,617 ಸಕ್ರಿಯ ಪ್ರಕರಣಗಳು
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 3,89,232 ತಲುಪಿದ್ದು, ಇವರಲ್ಲಿ 2,83,298 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟಂಬರ್ 05 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9746 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3093 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 3,89,232 ತಲುಪಿದ್ದು, ಇವರಲ್ಲಿ 2,83,298 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 99,617 ಪ್ರಕರಣಗಳಲ್ಲಿ, 769 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 6298 ಮಂದಿ ಅಸುನೀಗಿದ್ದಾರೆ.