ಕರ್ನಾಟಕ: 24 ಗಂಟೆಗಳಲ್ಲಿ 9540 ಹೊಸ ಕೋವಿಡ್‌ ಪ್ರಕರಣ ದಾಖಲು
ರಾಜ್ಯ

ಕರ್ನಾಟಕ: 24 ಗಂಟೆಗಳಲ್ಲಿ 9540 ಹೊಸ ಕೋವಿಡ್‌ ಪ್ರಕರಣ ದಾಖಲು

ಕೋವಿಡ್‌ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದ್ದರೂ, ರಾಜ್ಯ ಸರ್ಕಾರವು BIECಯಲ್ಲಿ ನಿರ್ಮಿಸಿದ್ದ ಕೋವಿಡ್‌ ಕೇರ್‌ ಸೆಂಟರ್‌ ಅನ್ನು ಸ್ಥಗಿತಗೊಳಿಸುವ ಕುರಿತು ಆತುರದ ನಿರ್ಧಾರ ಕೈಗೊಂಡಿದೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 9ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9540 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3419 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 4,21,730 ತಲುಪಿದ್ದು, ಇವರಲ್ಲಿ 3,15,433 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 99,470 ಪ್ರಕರಣಗಳಲ್ಲಿ, 776 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 6808 ಮಂದಿ ಅಸುನೀಗಿದ್ದಾರೆ.

09-09-2020 HMB English.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com