ಮಂಗಳೂರು ಗೋಲಿಬಾರ್ ಪ್ರಕರಣ: ಹತ್ತು ತಿಂಗಳ ಬಳಿಕ ಬಂಧಿತ 22 ಆರೋಪಿಗಳಿಗೆ ಜಾಮೀನು
ರಾಜ್ಯ

ಮಂಗಳೂರು ಗೋಲಿಬಾರ್ ಪ್ರಕರಣ: ಹತ್ತು ತಿಂಗಳ ಬಳಿಕ ಬಂಧಿತ 22 ಆರೋಪಿಗಳಿಗೆ ಜಾಮೀನು

ಹೈಕೋರ್ಟ್‌ ಜಾಮೀನು ಪಡೆದ ಪ್ರತಿಭಟನಾಕಾರರು ಬಿಡುಗಡೆಯಾಗಬೇಕಾದ ದಿನವೇ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಜಾಮೀನಿಗೆ ಮಧ್ಯಂತರ ತಡೆ ವಿಧಿಸಿ ಆದೇಶ ಹೊರಡಿಸಿತ್ತು.

ಪ್ರತಿಧ್ವನಿ ವರದಿ

ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ, ಗೋಲಿಬಾರ್‌ ಪ್ರಕರಣದಲ್ಲಿ ಬಂಧಿಯಾಗಿದ್ದ 22 ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.

ಡಿಸೆಂಬರ್‌ 19 ರಂದು ನಡೆದ ಪ್ರತಿಭಟನೆ ವೇಳೆ ಉಂಟಾದ ಘರ್ಷಣೆ ಸಂಬಂಧಪಟ್ಟಂತೆ, ಪೊಲೀಸರ ವಿರುದ್ಧ ಹಿಂಸಾಚಾರ ನಡೆಸಿದ ಆರೋಪದ ಮೇಲೆ ಮಂಗಳೂರು ಪೊಲೀಸರು 24 ಮಂದಿಯನ್ನು ಬಂಧಿಸಿದ್ದರು. ಆರೋಪಿಗಳ ಬಂಧನ ಮಾಡುವಾಗ ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಸಂಬಂಧಿಸಿದಂತೆ ಸರಿಯಾದ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಒದಗಿಸದೆ ಇರುವ ಅಂಶಗಳನ್ನು ಪರಿಗಣಿಸಿ ಈ ಹಿಂದೆಯೇ ಕರ್ನಾಟಕ ಹೈಕೋರ್ಟ್ ಎಲ್ಲಾ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.

ಆದರೆ, ಹೈಕೋರ್ಟ್‌ ಜಾಮೀನು ಪಡೆದ ಪ್ರತಿಭಟನಾಕಾರರು ಬಿಡುಗಡೆಯಾಗಬೇಕಾದ ದಿನವೇ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಜಾಮೀನಿಗೆ ಮಧ್ಯಂತರ ತಡೆ ವಿಧಿಸಿ ಆದೇಶ ಹೊರಡಿಸಿತ್ತು. ಇದೀಗ ಬಂಧನವಾಗಿ ಸರಿಸುಮಾರು ಹತ್ತು ತಿಂಗಳು ಕಳೆದ ಬಳಿಕ ಎಲ್ಲಾ ಆರೋಪಿಗಳಿಗೆ ಜಾಮೀನು ದೊರೆತಿದೆ.

Click here to follow us on Facebook , Twitter, YouTube, Telegram

Pratidhvani
www.pratidhvani.com