ಕರ್ನಾಟಕ: ಒಟ್ಟು 6,937 ಕರೋನಾ ಸೋಂಕಿತರು ಬಲಿ
ರಾಜ್ಯ

ಕರ್ನಾಟಕ: ಒಟ್ಟು 6,937 ಕರೋನಾ ಸೋಂಕಿತರು ಬಲಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 10 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9217 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 10 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9217 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3161 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 4,30,947 ತಲುಪಿದ್ದು, ಇವರಲ್ಲಿ 3,22,454 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 1,01,537 ಪ್ರಕರಣಗಳಲ್ಲಿ, 768 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 6,937 ಮಂದಿ ಅಸುನೀಗಿದ್ದಾರೆ.

10-09-2020 HMB English.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com