ಕರ್ನಾಟಕ: 8244 ಹೊಸ ಕರೋನಾ ಪ್ರಕರಣಗಳು ದಾಖಲು
ರಾಜ್ಯ

ಕರ್ನಾಟಕ: 8244 ಹೊಸ ಕರೋನಾ ಪ್ರಕರಣಗಳು ದಾಖಲು

ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 7384 ಮಂದಿ ಅಸುನೀಗಿದ್ದಾರೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 14ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 8244 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 2966 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 4,67,689 ತಲುಪಿದ್ದು, ಇವರಲ್ಲಿ 3,61,823 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 98,463 ಪ್ರಕರಣಗಳಲ್ಲಿ, 800 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 7384 ಮಂದಿ ಅಸುನೀಗಿದ್ದಾರೆ.

September 14 2020.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com