ಕೋವಿಡ್‌-19: ಬೆಂಗಳೂರಿನಲ್ಲಿ 1,76,712ಕ್ಕೇರಿದ ಕೋವಿಡ್‌ ಸೋಂಕಿತರ ಒಟ್ಟು ಸಂಖ್ಯೆ
ರಾಜ್ಯ

ಕೋವಿಡ್‌-19: ಬೆಂಗಳೂರಿನಲ್ಲಿ 1,76,712ಕ್ಕೇರಿದ ಕೋವಿಡ್‌ ಸೋಂಕಿತರ ಒಟ್ಟು ಸಂಖ್ಯೆ

ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 7481ಮಂದಿ ಅಸುನೀಗಿದ್ದಾರೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 15ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 7576ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3084 ಹೊಸ ಪ್ರಕರಣಗಳು ಕಂಡು ಬಂದಿವೆ. ಬೆಂಗಳೂರು ಒಂದರಲ್ಲೇ ಪತ್ತೆಯಾದ ಒಟ್ಟು ಪ್ರಕರಣಗಳ ಸಂಖ್ಯೆ 1,76,712ಕ್ಕೇರಿದೆ. ಇವರಲ್ಲಿ 1,34,516 ಜನರು ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 4,75,265 ತಲುಪಿದ್ದು, ಇವರಲ್ಲಿ 3,69,229 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 98,536 ಪ್ರಕರಣಗಳಲ್ಲಿ, 794 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 7481ಮಂದಿ ಅಸುನೀಗಿದ್ದಾರೆ.

September 15 2020.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com