ಕರ್ನಾಟಕ ಮುನ್ಸಿಪಲ್ ಕಾರ್ಪೊರೇಶನ್ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯಪಾಲರ ಅಂಕಿತ

ಕರ್ನಾಟಕ ರಾಜ್ಯ ಸರ್ಕಾರ ತಿದ್ದುಪಡಿ ತಂದಿರುವ ಕರ್ನಾಟಕ ಮುನ್ಸಿಪಲ್‌ ಕಾರ್ಪೊರೇಶನ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯಪಾಲ ವಜುಬಾಯಿ ವಾಲ ಅವರು ಒಪ್ಪಿಗೆ ನೀಡಿದ್ದಾರೆ.

ಬಿಬಿಎಂಪಿಯಲ್ಲಿ ಕೌನ್ಸಿಲರ್‌ ಗಳ ಸಂಖ್ಯೆಯನ್ನು ಹೆಚ್ಚಿಸಲು ತಿದ್ದುಪಡಿಯನ್ನು ತರಲಾಗಿದ್ದು ಕನಿಷ್ಟ 225 ಹಾಗೂ ಗರಿಷ್ಟ 250 ಕೌನ್ಸಿಲರ್‌ಗಳನ್ನು ಆಯ್ಕೆ ಮಾಡಲು ಈ ಹೊಸ ತಿದ್ದುಪಡಿಯು ಅವಕಾಶ ಮಾಡಿಕೊಡುತ್ತದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ವಾರ್ಡುಗಳನ್ನು ವಿಂಗಡಿಸುವ ಸಂಧರ್ಭದಲ್ಲಿ ಒಂದೇ ವಾರ್ಡನ್ನು ಎರಡು ವಿಧಾನ ಸಭಾ ಕ್ಷೇತ್ರಗಳಲ್ಲಿ ವಿಭಜನೆಯಾಗದಂತೆ ವಾರ್ಡುಗಳನ್ನು ವಿಂಗಡಿಸಬೇಕೆಂದು ಈ ತಿದ್ದುಪಡಿಯಲ್ಲಿ ಹೇಳಲಾಗಿದೆ.

ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದಾರಂಭದಲ್ಲಿ ಬಿಬಿಎಂಪಿ ಚುನಾವಣೆ ನಡೆಯಬೇಕಿತ್ತು. ಈಗ ಈ ತಿದ್ದುಪಡಿಯಿಂದಾಗಿ ಚುನಾವಣೆ ಮುಂದೂಡಲ್ಪಡುವ ಸಾಧ್ಯತೆ ಇದೆ. ಈಗಾಗಲೇ ಹಲವು ವಾರ್ಡುಗಳನ್ನು ವಿಭಜಿಸಿ ಬಿಬಿಎಂಪಿ ಆದೇಶ ಹೊರಡಿಸಿತ್ತು. ಈ ಹಿಂದೆ ಮಾಡಿದ್ದ ವಾರ್ಡು ವಿಂಗಡಣೆಯಲ್ಲಿ ಬಿಬಿಎಂಪಿ ಮಾಜಿ ಮೇಯರ್‌ ಗೌತಮ್‌ ಕುಮಾರ್‌ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.

BBMP New Amendment (1).pdf
download

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com