ಕರ್ನಾಟಕ: 7 ಲಕ್ಷ ದಾಟಿದ ಕರೋನಾ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 9,891 ಮಂದಿ ಅಸುನೀಗಿದ್ದಾರೆ.
ಕರ್ನಾಟಕ: 7 ಲಕ್ಷ ದಾಟಿದ ಕರೋನಾ ಸೋಂಕಿತರ ಸಂಖ್ಯೆ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 9ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 10,514 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 4563 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 7,00,786ಕ್ಕೆ ತಲುಪಿದೆ. ಸಕ್ರಿಯವಾಗಿರುವ 1,20,929 ಪ್ರಕರಣಗಳಲ್ಲಿ, 892 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 9,891 ಮಂದಿ ಅಸುನೀಗಿದ್ದಾರೆ. ಕಳೆದ 24 ಗಂಟೆಯಲ್ಲಿ 102 ಮಂದಿ ಸಾವನ್ನಪ್ಪಿದ್ದಾರೆ.

October 10.pdf
download

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com