ಮಹಿಳಾ ಸಾಂತ್ವಾನ ಕೇಂದ್ರಗಳಿಗಿಲ್ಲ ಅನುದಾನ: ಅಸಮಾಧಾನ ವ್ಯಕ್ತಪಡಿಸಿದ ಹೆಚ್‌ಡಿಕೆ

ಲಾಕ್ ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ, ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮಹಿಳಾ ಸಾಂತ್ವಾನ ಕೇಂದ್ರಗಳಿಗಿಲ್ಲ ಅನುದಾನ: ಅಸಮಾಧಾನ ವ್ಯಕ್ತಪಡಿಸಿದ ಹೆಚ್‌ಡಿಕೆ

ಮಹಿಳೆಯರ ಸಾಂತ್ವಾನ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡದ ರಾಜ್ಯ ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಈ ಬಗ್ಗೆ ಮೌನಕ್ಕೆ ಶರಣಾಗಿದೆ. ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದ ಮುಖ್ಯಮಂತ್ರಿಗಳು ಇದುವರೆಗೂ ಸಾಂತ್ವನ ಕೇಂದ್ರಗಳಿಗೆ ಒಂದು ನಯಾಪೈಸೆ ಬಿಡುಗಡೆ ಮಾಡದಿರುವುದು ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ,” ಎಂದು ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯವನ್ನು ನಿಯಂತ್ರಿಸಲು ಹಾಗೂ ಅವರಿಗೆ ಅಗತ್ಯವಾಗಿರುವ ಆಪ್ತ ಸಮಾಲೋಚನೆ ಮತ್ತು ಕಾನೂನು ಸಲಹೆಗಳನ್ನು ನೀಡಲು ಎಲ್ಲಾ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈಗ ಅವುಗಳಿಗೆ ಸಮರ್ಪಕ ಅನುದಾನ ದೊರೆಯುತ್ತಿಲ್ಲ.

“ಅಲ್ಲಿನ ಸಿಬ್ಬಂದಿಗಳಿಗೂ ಸರಿಯಾ ದ ವೇತನ ದೊರೆಯುತ್ತಿಲ್ಲ. ಲಾಕ್ ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು,” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com