ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತ

ಇತ್ತೀಚಿಗೆ ವಿದ್ಯಾಗಮ ಯೋಜನೆಯಡಿಯಲ್ಲಿ ಗ್ರಾಮಗಳಿಗೆ ತೆರಳಿ ಪಾಠ ಮಾಡುತ್ತಿದ್ದ ಶಿಕ್ಷಕರು ಕರೋನಾ ಸೋಂಕಿಗೆ ತುತ್ತಾದ್ದರಿಂದ ಈ ಯೋಜನೆಯ ವಿರುದ್ದ ಅಪಸ್ವರ ಎದ್ದಿತ್ತು.
ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತ

ಕೋವಿಡ್-19 ಕಾರಣದಿಂದಾಗಿ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ನಿರ್ದೇಶನ ನೀಡಿದ್ದಾರೆ. ಈ ಕುರಿತಾಗಿ ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿಯೂ ಬರದುಕೊಂಡಿದ್ದಾರೆ.

“ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ‌ ಹಾಗೂ ಅದರ ಸಮರ್ಪಕ‌ ವಿಶ್ಲೇಷಣೆ‌ ಪೂರ್ಣಗೊಳ್ಳುವವರೆಗೂ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ,” ಎಂದು ಬರೆದುಕೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇತ್ತೀಚಿಗೆ ವಿದ್ಯಾಗಮ ಯೋಜನೆಯಡಿಯಲ್ಲಿ ಗ್ರಾಮಗಳಿಗೆ ತೆರಳಿ ಪಾಠ ಮಾಡುತ್ತಿದ್ದ ಶಿಕ್ಷಕರು ಕರೋನಾ ಸೋಂಕಿಗೆ ತುತ್ತಾದ್ದರಿಂದ ಈ ಯೋಜನೆಯ ವಿರುದ್ದ ಅಪಸ್ವರ ಎದ್ದಿತ್ತು. ಶಾಲೆಗಳ ಪುನರಾರಂಭಕ್ಕೂ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈಗ ವಿದ್ಯಾಗಮ ಯೋಜನೆಯನ್ನೂ ಸ್ಥಗಿತಗೊಳಿಸುವ ನಿರ್ದೇಶನ ನೀಡಲಾಗಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com