ಶಾಲಾ ಮಧ್ಯಂತರ ರಜೆ ರದ್ದು: ಸರ್ಕಾರದ ನಡೆಗೆ HD ಕುಮಾರಸ್ವಾಮಿ ಖಂಡನೆ

ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿರುವ ಕುಮಾರಸ್ವಾಮಿ ಶಿಕ್ಷಕರಿಗೆ ಕೂಡಲೇ ಮಧ್ಯಂತರ ರಜೆ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಶಾಲಾ ಮಧ್ಯಂತರ ರಜೆ ರದ್ದು: ಸರ್ಕಾರದ ನಡೆಗೆ HD ಕುಮಾರಸ್ವಾಮಿ ಖಂಡನೆ

ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿರುವ ಕುಮಾರಸ್ವಾಮಿ ಶಿಕ್ಷಕರಿಗೆ ಕೂಡಲೇ ಮಧ್ಯಂತರ ರಜೆ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತು ಸರಣಿ ಟ್ವೀಟ್‌ ಮಾಡಿದ ಕುಮಾರಸ್ವಾಮಿ, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕರೋನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಸರ್ಕಾರದ ವಿರುದ್ಧ ಎಚ್‌ಡಿಕೆ ಹರಿಹಾಯ್ದಿದ್ದಾರೆ.

ಈ ವರ್ಷದ ಅಕ್ಟೋಬರ್‌ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಕರೋನಾ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ? ಎಂದು ಕೇಳಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. 'ಹರ ಮುನಿದರೂ ಗುರು ಕಾಯ್ವನು' ಎಂಬುದನ್ನು ಸರಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಟ್ವಿಟರ್‌ ಮೂಲಕ ಆಗ್ರಹಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com