ಪಿಯುಸಿ ಶಿಕ್ಷಕರ ನೇಮಕಾತಿ ಪತ್ರ ನೀಡುವಂತೆ ಸಿದ್ದರಾಮಯ್ಯ ಆಗ್ರಹ

ನೇಮಕಾತಿ ಪತ್ರ ದೊರೆಯದ ಹಿನ್ನೆಲೆಯಲ್ಲಿ ನೂರಾರು ಅಭ್ಯರ್ಥಿಗಳು ಬೆಂಗಳೂರಿನ ಪಿಯುಸಿ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಪಿಯುಸಿ ಶಿಕ್ಷಕರ ನೇಮಕಾತಿ ಪತ್ರ ನೀಡುವಂತೆ ಸಿದ್ದರಾಮಯ್ಯ ಆಗ್ರಹ

ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ತಿಂಗಳು ಕಳೆದರೂ ನೇಮಕಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡದಿರುವ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನೇಮಕಾತಿ ಪತ್ರ ದೊರೆಯದ ಹಿನ್ನೆಲೆಯಲ್ಲಿ ನೂರಾರು ಅಭ್ಯರ್ಥಿಗಳು ಬೆಂಗಳೂರಿನ ಪಿಯುಸಿ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಪಿಯುಸಿ ನೇಮಕಾತಿ ಪ್ರಕ್ರಿಯೆ ಮುಗಿದ ಮೇಲೆಯೂ ನೇಮಕಾತಿ ಪತ್ರ ದೊರೆಯದೇ ಈ ದಿನ ಮಳೆಯಲ್ಲಿಯೇ ಪಿಯುಸಿ ಮಂಡಳಿಯ ಎದುರು ಕೂತಿದ್ದಾರೆ. ಈಗಲಾದರೂ ಕಣ್ಣು ತೆರೆಯಿರಿ. ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿ ಅವರ ಆತಂಕವನ್ನು ದೂರ ಮಾಡಿ' ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರನ್ನು ಉಲ್ಲೇಖಿಸಿ ಟ್ವೀಟ್‌ ಮುಖಾಂತರ ಒತ್ತಾಯಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com