ಶಿರಾ ಮತ್ತು ಆರ್‌ಆರ್‌ ನಗರ ಬಿಜೆಪಿ ಅಭ್ಯರ್ಥಿ ಆಯ್ಕೆ

ಶಿರಾ ಮತ್ತು ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕೊನೆಗೂ ಅಂತಿಮಗೊಂಡಿದೆ.
ಶಿರಾ ಮತ್ತು ಆರ್‌ಆರ್‌ ನಗರ ಬಿಜೆಪಿ ಅಭ್ಯರ್ಥಿ ಆಯ್ಕೆ

ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಕೊನೆಗೂ ಆಯ್ಕೆಯಾಗಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಮಂಗಳವಾರದಂದು ಕರ್ನಾಟಕ ಸೇರಿದಂತೆ, ಉತ್ತರ ಪ್ರದೇಶ (6 ಸ್ಥಾನ) ಮತ್ತು ನಾಗಾಲ್ಯಾಂಡ್‌ನಲ್ಲಿ (1 ಸ್ಥಾನ) ನಡೆಯಲಿರುವ ಉಪ ಚುನಾವಣೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ನಿರೀಕ್ಷೆಯಂತೆ ಮುನಿರತ್ನ ಅವರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇನ್ನು ಶಿರಾದಲ್ಲಿ ಡಾ. ರಾಜೇಶ್‌ ಗೌಡ‌ ಅವರು ಬಿಜೆಪಿ ಪರವಾಗಿ ಕಣಕ್ಕಿಳಿಯಲಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮುನಿರತ್ನ ಅವರು ಈ ಹಿಂದೆ ಕಾಂಗ್ರೆಸ್‌ನಿಂದ ಶಾಸಕರಾಗಿ ಗೆದ್ದಿದ್ದರು. ಕಳೆದ ವರ್ಷ ನಡೆದ ಆಪರೇಷನ್‌ ಕಮಲದ ಮೂಲಕ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿ ತೆಕ್ಕೆಗೆ ಸೇರಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆಸಿದ್ದಾರೆ ಎಂಬ ಆರೋಪ ಅವರ ವಿರುದ್ದ ಕೇಳಿ ಬಂದ ಹಿನ್ನೆಲೆಯಲ್ಲಿ, ಡಿಸೆಂಬರ್‌ನಲ್ಲಿ ನಡೆಯಬೇಕಾಗಿದ್ದ ಚುನಾವಣೆ ಮುಂದೂಡಲಾಗಿತ್ತು. ಈಗ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್‌ನ ಕುಮಸುಮಾ ರವಿ ಅವರು ಸ್ಪರ್ಧಿಸಲಿದ್ದಾರೆ.

ಶಿರಾ ಮತ್ತು ಆರ್‌ಆರ್‌ ನಗರ ಬಿಜೆಪಿ ಅಭ್ಯರ್ಥಿ ಆಯ್ಕೆ
ತುಳಸಿ ಮುನಿರಾಜು ಅರ್ಜಿ ವಜಾಗೊಳಿಸಿದ ಸುಪ್ರಿಂ: ಮುನಿರತ್ನ ನಿರಾಳ

ಇನ್ನು ಮಾಜಿ ಸಂಸದ ಮೂಡಲಗಿರಿಯಪ್ಪ ಅವರ ಪುತ್ರ ಮತ್ತು ಮಾಜಿ ಕಾಂಗ್ರೆಸ್ಸಿಗ ಡಾ. ರಾಜೇಶ್‌ ಗೌಡ‌‌ ಅವರು ಶಿರಾದಲ್ಲಿ ಚುನಾವಣೆ ಎದುರಿಸಲಿದ್ದಾರೆ. ಇವರು ಮತ್ತು ಸಿದ್ದರಾಮಯ್ಯ ಪುತ್ರ ಶಾಸಕ ಡಾ. ಯತೀಂದ್ರ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಡಯಾಗ್ನಾಸ್ಟಿಕ್‌ ಲ್ಯಾಬ್‌ ತೆರೆಯಲು ಗುತ್ತಿಗೆ ಪಡೆದುಕೊಂಡಿದ್ದರು. ಆ ಸಂದರ್ಭದಲ್ಲಿ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ದ ಆಡಳಿತ ದುರುಪಯೋಗದ ಅಪವಾದ ಹೊರಿಸಿದ್ದರು. ಇದರಿಂದಾಗಿ ಡಾ. ಯತೀಂದ್ರ ಅವರು ಕಂಪೆನಿಯನ್ನು ಬಿಟ್ಟು ಹೊರ ನಡೆದಿದ್ದರು.

ಇವರಿಗೆ ಪ್ರತಿಸ್ಫರ್ಧಿಯಾಗಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ಟಿ ಬಿ ಜಯಚಂದ್ರ ಹಾಗೂ ಜೆಡಿಎಸ್‌ನಿಂದ ಮಾಜಿ ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಜಮ್ಮ ಕಣಕ್ಕಿಳಿಯಲಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com