ಕರ್ನಾಟಕ: ಕರೋನಾ ಸೋಂಕಿನಿಂದ 6 ಲಕ್ಷ ಜನ ಗುಣಮುಖ
ಕಳೆದ 24 ಗಂಟೆಯಲ್ಲಿ 10,421 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಕರ್ನಾಟಕ: ಕರೋನಾ ಸೋಂಕಿನಿಂದ 6 ಲಕ್ಷ ಜನ ಗುಣಮುಖ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಕ್ಟೋಬರ್‌ 13ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 8,191 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3776 ಹೊಸ ಪ್ರಕರಣಗಳು ಕಂಡು ಬಂದಿವೆ.

October 13.pdf
download

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 7,26,106 ತಲುಪಿದ್ದು, ಇವರಲ್ಲಿ 6,02,505 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 1,13,459 ಪ್ರಕರಣಗಳಲ್ಲಿ, 919 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 10,123 ಮಂದಿ ಅಸುನೀಗಿದ್ದಾರೆ. ಕಳೆದ 24 ಗಂಟೆಯಲ್ಲಿ 10,421 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com