ಕರ್ನಾಟಕ: 5018 ಹೊಸ ಕೋವಿಡ್‌ ಪ್ರಕರಣಗಳು ದಾಖಲು

ಕರೋನಾದಿಂದಾಗಿ ಇಂದು 64 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನ ಮರಣ ಪ್ರಮಾಣ ಶೇಕಡಾ 1.27ರಷ್ಟಿದೆ
ಕರ್ನಾಟಕ: 5018 ಹೊಸ ಕೋವಿಡ್‌ ಪ್ರಕರಣಗಳು ದಾಖಲು

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಕ್ಟೋಬರ್‌ 19ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 5018 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 2481 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 7,70,604 ತಲುಪಿದ್ದು, ಇವರಲ್ಲಿ 6,53,829 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 1,06,214 ಪ್ರಕರಣಗಳಲ್ಲಿ, 932 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 10,542 ಮಂದಿ ಅಸುನೀಗಿದ್ದಾರೆ. ಕರೋನಾದಿಂದಾಗಿ ಇಂದು 64 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನ ಮರಣ ಪ್ರಮಾಣ ಶೇಕಡಾ 1.27ರಷ್ಟಿದೆ

Attachment
PDF
5_6082141851161199150.pdf
Preview

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com