ಉತ್ತರ ಕರ್ನಾಟಕ ನೆರೆ: ಮುಖ್ಯಮಂತ್ರಿಯಿಂದ ವೈಮಾನಿಕ ಸಮೀಕ್ಷೆ

ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ , ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸಾಥ್‌ ನೀಡಿದರು.
ಉತ್ತರ ಕರ್ನಾಟಕ ನೆರೆ: ಮುಖ್ಯಮಂತ್ರಿಯಿಂದ ವೈಮಾನಿಕ ಸಮೀಕ್ಷೆ

ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಿಂದಾಗಿ ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ವಿಜಯಪುರ ಮೊದಲಾದ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ಉಂಟಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅತಿವೃಷ್ಟಿ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ.

ಕಲಬುರ್ಗಿ ಜಿಲ್ಲೆಯಲ್ಲಿ ಮಳೆ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುವ ಮೂಲಕ ಪರಿಸ್ಥಿತಿ ಅವಲೋಕನ ಮಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ , ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸಾಥ್‌ ನೀಡಿದರು.

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿವೆ. ಕಲಬುರಗಿ, ಬೆಳಗಾವಿ, ವಿಜಯಪುರ, ಗದಗ ಜಿಲ್ಲೆಗಳಲ್ಲಿ ನೆರೆಯಿಂದಾಗಿ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಭೀಕರ ಪ್ರವಾಹಕ್ಕೆ ಸಿಲುಕಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೃಷಿ ಜಮೀನುಗಳು ಮುಳುಗಡೆಯಾಗಿವೆ. ಜನರಿಗೆ ತಾತ್ಕಾಲಿಕವಾಗಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗುತ್ತಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com