ಕರ್ನಾಟಕ: 5778 ಹೊಸ ಕರೋನಾ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 7,88,551 ತಲುಪಿದ್ದು, ಇವರಲ್ಲಿ 6,84,835 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.
ಕರ್ನಾಟಕ: 5778 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಕ್ಟೋಬರ್‌ 22ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 5778 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 2807 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 7,88,551 ತಲುಪಿದ್ದು, ಇವರಲ್ಲಿ 6,84,835 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 92,927 ಪ್ರಕರಣಗಳಲ್ಲಿ, 940 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 10,770 ಮಂದಿ ಅಸುನೀಗಿದ್ದಾರೆ. ಕರೋನಾದಿಂದಾಗಿ ಇಂದು 74 ಜನರು ಮೃತಪಟ್ಟಿದ್ದಾರೆ.

Attachment
PDF
5_6093512811437097348.pdf
Preview

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com