ಕರ್ನಾಟಕ: 8 ಲಕ್ಷ ದಾಟಿದ ಒಟ್ಟು ಕರೋನಾ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 10,905 ಮಂದಿ ಅಸುನೀಗಿದ್ದಾರೆ.
ಕರ್ನಾಟಕ: 8 ಲಕ್ಷ ದಾಟಿದ ಒಟ್ಟು ಕರೋನಾ ಸೋಂಕಿತರ ಸಂಖ್ಯೆ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಕ್ಟೋಬರ್‌ 25ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 4439 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 2468 ಹೊಸ ಪ್ರಕರಣಗಳು ಕಂಡು ಬಂದಿವೆ.

Attachment
PDF
October 25.pdf
Preview

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,02,817 ತಲುಪಿದ್ದು, ಇವರಲ್ಲಿ 7,10,843 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 81,050 ಪ್ರಕರಣಗಳಲ್ಲಿ, 934 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 10,905 ಮಂದಿ ಅಸುನೀಗಿದ್ದಾರೆ. ಕರೋನಾದಿಂದಾಗಿ ಇಂದು 32 ಜನರು ಮೃತಪಟ್ಟಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com