ಮುನಿರತ್ನ ಶಾಸಕನಾಗಲು ಕಾಂಗ್ರೆಸ್ ಪಕ್ಷ ಕಾರಣ - ಸಿದ್ದರಾಮಯ್ಯ

ಮುನಿರತ್ನ ಅವರು ಎರಡು ಬಾರಿ ಗೆದ್ದು ಶಾಸಕನಾಗಲು ಕಾರಣ ಕಾಂಗ್ರೆಸ್ ಪಕ್ಷವೇ ಹೊರತು ಅವರ ವೈಯಕ್ತಿಕ ವರ್ಚಸ್ಸಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ
ಮುನಿರತ್ನ ಶಾಸಕನಾಗಲು ಕಾಂಗ್ರೆಸ್ ಪಕ್ಷ ಕಾರಣ - ಸಿದ್ದರಾಮಯ್ಯ

ರಾಜ್ಯದಲ್ಲಿ ಉಪಚುನಾವಣೆ ಕಾವು ಏರುತ್ತಿದೆ. ರಾಜ್ಯದ ಮೂರು ಪ್ರಬಲ ಪಕ್ಷಗಳು ಚುನಾವಣೆಯಲ್ಲಿ ಗೆಲ್ಲಲು ಶತಾಯಗತಾಯ ಪ್ರಯತ್ನಿಸುತ್ತಿದೆ. ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಿಂತಿರುವ ಕಾಂಗ್ರೆಸ್‌ ಮಾಜಿ ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್‌ ನಾಯಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುನಿರತ್ನ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸ್‌ ಇಲಾಖೆಗೆ ಎಚ್ಚರಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮುನಿರತ್ನ ಅವರು ಎರಡು ಬಾರಿ ಗೆದ್ದು ಶಾಸಕನಾಗಲು ಕಾರಣ ಕಾಂಗ್ರೆಸ್ ಪಕ್ಷವೇ ಹೊರತು ಅವರ ವೈಯಕ್ತಿಕ ವರ್ಚಸ್ಸಲ್ಲ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿಯಾಗಿದ್ದಾಗ ಆರ್.ಆರ್ ನಗರ ಕ್ಷೇತ್ರದ ಅಭಿವೃದ್ಧಿಗೆ ರೂ.2,000 ಕೋಟಿ ಅನುದಾನ ನೀಡಿದ್ದೆ, ಆದರೂ ನಮಗೆ ದ್ರೋಹ ಮಾಡಿದ್ರಲ ಮುನಿರತ್ನ ಅವರೇ, ಅಂಥಾ ಅನ್ಯಾಯ ನಾವೇನು ಮಾಡಿದ್ದೇವೆ ನಿಮಗೆ? ಎಂದು ಪ್ರಶ್ನಿಸಿದ್ದಾರೆ.

ಮುನಿರತ್ನ ಶಾಸಕನಾಗಲು ಕಾಂಗ್ರೆಸ್ ಪಕ್ಷ ಕಾರಣ - ಸಿದ್ದರಾಮಯ್ಯ
ಗೂಂಡಾ ರಾಜಕಾರಣವನ್ನು ಮತದಾರರು ಸೋಲಿಸಬೇಕು – ದಿನೇಶ್ ಗುಂಡೂರಾವ್

ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷವನ್ನು ತನ್ನ ತಾಯಿ ಎಂದು ಹೇಳುತ್ತಿದ್ದ ಮುನಿರತ್ನ ಅದೇ ತಾಯಿಗೆ ದ್ರೋಹ ಬಗೆದು ಬಿಜೆಪಿ ಸೇರಿದ್ರು. ನಾವು ಯಾಕಪ್ಪಾ ಪಕ್ಷನ ತಾಯಿ ಅಂತ ಕರೀತಿದ್ದಿ, ಈಗ ಅದೇ ತಾಯಿಗೆ ಮೋಸ ಮಾಡಿದ್ಯಲ ಅಂದ್ರೆ ಕಾಂಗ್ರೆಸ್ ನಾಯಕರು ನನ್ನ ತಾಯಿಗೆ ಅವಮಾನ ಮಾಡ್ತಿದಾರೆಂದು ಗೊಳೋ ಅಂತ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುನಿರತ್ನ ಶಾಸಕನಾಗಲು ಕಾಂಗ್ರೆಸ್ ಪಕ್ಷ ಕಾರಣ - ಸಿದ್ದರಾಮಯ್ಯ
ಮುನಿರತ್ನ ಗೂಂಡಾಗಿರಿಗೆ ನಾವು ಹೆದರುವುದಿಲ್ಲ, ಹುಷಾರ್!- ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧವೂ ತನ್ನ ಟೀಕಾ ಪ್ರಹಾರ ಮುಂದುವರೆಸಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಕಡಿತ ಮಾಡಿದೆ, ಅದರ ಜೊತೆಗೆ ವಿತರಣೆ ಆಗುತ್ತಿರುವ ಆಹಾರ ಪದಾರ್ಥಗಳು ಕಲಬೆರಕೆ ಬೇರೆ. ನಾನು ಶಿರಾಕ್ಕೆ ಹೋದಾಗ ಸರ್ಕಾರ ಕೊಡ್ತಿರುವ ರಾಗಿನ ಕೋಳಿ ಸಹಾ ತಿನ್ನಲ್ಲ ಅಷ್ಟು ಕಲ್ಲು, ಕಡ್ಡಿಗಳಿವೆ ಅಂತ ಜನ ಹಿಡಿಹಿಡಿ ಶಾಪ ಹಾಕುತ್ತಿದ್ದರು. ನಾಚಿಕೆಯಾಗ್ಬೇಕು ಈ ಸರ್ಕಾರಕ್ಕೆ ಎಂದಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com