ಕರ್ನಾಟಕದಲ್ಲಿ ಸಿಎಂ ಬದಲಾವಣೆ ಖಚಿತ – ಸಿದ್ದರಾಮಯ್ಯ

ಯಡಿಯೂರಪ್ಪ ಬದಲಾಗ್ತಾರೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ, ಇದರ ಜೊತೆಗೆ ಬೇರೆ ಹಲವು ಕಾರಣಗಳೂ ಇವೆ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಖಚಿತ – ಸಿದ್ದರಾಮಯ್ಯ

ಶಿರಾ ಮತ್ತು ಆರ್‌ ಆರ್‌ ನಗರ ಉಪಚುನಾವಣೆಯ ನಂತರ ಕರ್ನಾಟಕದ ಬಿಜೆಪಿ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ದೆಹಲಿಯಿಂದ ನನಗೆ ದೊರೆತಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ. I am very confident ಯಡಿಯೂರಪ್ಪ ಬದಲಾಗ್ತಾರೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ, ಇದರ ಜೊತೆಗೆ ಬೇರೆ ಹಲವು ಕಾರಣಗಳೂ ಇವೆ,” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದರೊಂದಿಗೆ ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಕೂಡಾ ವ್ಯಕ್ತಪಡಿಸಿದರು ಸಿದ್ದರಾಮಯ್ಯ ಅವರು, ಎರಡೂ ಕ್ಷೇತ್ರಗಳಲ್ಲಿಯೂ ಜನರು ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಆತ್ಮವಿಶ್ವಾಸದ ನುಡಿಗಳನ್ನಾಡಿದ್ದಾರೆ.

“ರಾಜ್ಯಾದ್ಯಂತ ಆಡಳಿತ ವಿರೋಧಿ ಅಲೆಯಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ಕಾನೂನುಗಳಿಂದ ಜನ ಬೇಸತ್ತಿದ್ದಾರೆ. ಅವೆಲ್ಲಾ ಕಾಂಗ್ರೆಸ್ ಮತಗಳಾಗಿ ಪರಿವರ್ತನೆಯಾಗಿವೆ,” ಎಂದು ವಿಶ್ಲೇಷಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಶಾಲೆಗಳ ಪುನರಾರಂಭದ ಕುರಿತಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರು ರಾಜ್ಯ ಸಂಪೂರ್ಣ ಕರೋನಾ ಮುಕ್ತವಾಗುವವರೆಗೆ ಶಾಲೆ ಆರಂಭಿಸುವುದು ಬೇಡ. ಈ ವರ್ಷ ಎಲ್ಲಾ ತರಗತಿಗಳಿಗೆ ಆನ್‌ಲೈನ್ ಮೂಲಕ ಪಾಠ ಮಾಡಿ, ಎಲ್ಲರನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಿ. ಸರ್ಕಾರ ಶಾಲೆ ತೆರೆಯುವ ದುಸ್ಸಾಹಸ ಮಾಡುವುದು ಬೇಡ, ಎಂದಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com