ಕರ್ನಾಟಕ: 3377 ಹೊಸ ಕರೋನಾ ಪ್ರಕರಣಗಳು ದಾಖಲು

ಕರ್ನಾಟಕ: 3377 ಹೊಸ ಕರೋನಾ ಪ್ರಕರಣಗಳು ದಾಖಲು

ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,281ಮಂದಿ ಅಸುನೀಗಿದ್ದಾರೆ.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್‌ 4ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 3377 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 1953 ಹೊಸ ಪ್ರಕರಣಗಳು ಕಂಡು ಬಂದಿವೆ.

Attachment
PDF
November 4.pdf
Preview

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,35,773 ತಲುಪಿದ್ದು, ಇವರಲ್ಲಿ 7,88,780 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 35,693 ಪ್ರಕರಣಗಳಲ್ಲಿ, 928 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,281ಮಂದಿ ಅಸುನೀಗಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com