ಸೇರೊ ಸರ್ವೆ: ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ - ಆರೋಗ್ಯ ಸಚಿವ ಡಾ. ಕೆ ಸುಧಾಕರ್

ಇದೇ ರೀತಿ ಡಿಸೆಂಬರ್ ಅಂತ್ಯದಲ್ಲಿ ಒಂದು ಹಾಗೂ ಮಾರ್ಚ್ ಅಂತ್ಯಕ್ಕೆ ಮತ್ತೊಂದು ಸರ್ವೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ಸೇರೊ ಸರ್ವೆ: ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ - ಆರೋಗ್ಯ ಸಚಿವ ಡಾ. ಕೆ ಸುಧಾಕರ್

ರಾಜ್ಯದಲ್ಲಿ ಸರ್ಕಾರ ನಡೆಸಿದ ಸೆರೋ ಸರ್ವೆಯ ವರದಿಯನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಅವರು ಬಿಡುಗಡೆಗೊಳಿಸಿದ್ದಾರೆ. ರಾಜ್ಯದ ಶೇ.16 ಜನರಲ್ಲಿ ಕರೋನಾ ಸೋಂಕಿನ ಪ್ರತಿಕಾಯ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿಯೂ ಸೆರೋ ಸರ್ವೆಯನ್ನು ನಡೆಸಲಾಗಿದೆ. 16,585 ಜನರ ಮಾದರಿಗಳನ್ನು ಪಡೆದು ಪರೀಕ್ಷೆ ಮಾಡಿದ್ದು, 15,624 ಜನರ ಫಲಿತಾಂಶ ಬಂದಿದೆ. ಹಿಂದೆ ಹಾಗೂ ಸರ್ವೆ ಮಾಡುವ ಸಮಯದಲ್ಲಿ ಸೋಂಕಿಗೆ ಒಳಗಾಗಿದ್ದವರ ಒಟ್ಟು ಪ್ರಮಾಣ 27.3% ರಷ್ಟಿದೆ ಎಂದು ತಿಳಿಸಿದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಸರ್ವೆ 2020 ರ ಸೆಪ್ಟೆಂಬರ್ 3 ರಿಂದ 16 ರವರೆಗೆ ನಡೆದಿತ್ತು. ಕೋವಿಡ್ ಮರಣ ಪ್ರಮಾಣವನ್ನು ಸೋಂಕಿಗೆ ಒಳಗಾದ ಒಟ್ಟು ಜನರಿಗೆ ಹೋಲಿಸಿದರೆ, ಬಹಳ ಕಡಿಮೆ ಇದೆ. ರಾಜ್ಯದಲ್ಲಿ ಮರಣ ಪ್ರಮಾಣ 0.05% ಇದೆ. ಮುಂಬೈಯಲ್ಲಿ 0.05-0.10%, ಪುಣೆಯಲ್ಲಿ 0.08%, ದೆಹಲಿಯಲ್ಲಿ 0.09%, ಚೆನ್ನೈನಲ್ಲಿ 0.13% ಮರಣ ಪ್ರಮಾಣವಿದೆ ಎಂದು ವಿವರಿಸಿದರು.

ಇದೇ ರೀತಿ ಡಿಸೆಂಬರ್ ಅಂತ್ಯದಲ್ಲಿ ಒಂದು ಹಾಗೂ ಮಾರ್ಚ್ ಅಂತ್ಯಕ್ಕೆ ಮತ್ತೊಂದು ಸರ್ವೆ ನಡೆಸಲಾಗುವುದು ಎಂದು ತಿಳಿಸಿದರು.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com