ಕರ್ನಾಟಕ: ಎಂಟು ಲಕ್ಷ ಸಮೀಪಿಸುತ್ತಿರುವ ಕೋವಿಡ್‌ನಿಂದ ಗುಣಮುಖರಾದವರ ಸಂಖ್ಯೆ

ಸಕ್ರಿಯವಾಗಿರುವ 33, 950 ಪ್ರಕರಣಗಳಲ್ಲಿ, 916 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.
ಕರ್ನಾಟಕ: ಎಂಟು ಲಕ್ಷ ಸಮೀಪಿಸುತ್ತಿರುವ ಕೋವಿಡ್‌ನಿಂದ ಗುಣಮುಖರಾದವರ ಸಂಖ್ಯೆ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್‌ 5ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 3156 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 1627 ಹೊಸ ಪ್ರಕರಣಗಳು ಕಂಡು ಬಂದಿವೆ.

Attachment
PDF
November 5.pdf
Preview

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,38,929 ತಲುಪಿದ್ದು, ಇವರಲ್ಲಿ 7,94,503 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 33, 950 ಪ್ರಕರಣಗಳಲ್ಲಿ, 916 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,312ಮಂದಿ ಅಸುನೀಗಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com