ವಿನಯ್‌ ಕುಲಕರ್ಣಿ ಬಂಧನ ರಾಜಕೀಯ ದುರುದ್ದೇಶಪೂರಿತ ಕ್ರಮ – ಸಿದ್ದರಾಮಯ್ಯ

“ಇಂತಹ ಸವಾಲನ್ನು ಎದುರಿಸಿ ಗೆಲ್ಲುವ ಶಕ್ತಿಯನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ,” ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿನಯ್‌ ಕುಲಕರ್ಣಿ ಬಂಧನ ರಾಜಕೀಯ ದುರುದ್ದೇಶಪೂರಿತ ಕ್ರಮ – ಸಿದ್ದರಾಮಯ್ಯ

ಮಾಜಿ ಸಚಿವ ಹಾಗೂ ಧಾರವಾಡದ ಕಾಂಗ್ರೆಸ್‌ ನಾಯಕ ವಿನಯ್‌ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ವಿನಯ್‌ ಅವರ ಬಂಧನದ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ ಎಂದು ಅವರು ಹೇಳಿದ್ದಾರೆ.

“ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವುದು ರಾಜಕೀಯ ದುರುದ್ದೇಶಪೂರಿತ ಕ್ರಮ. ಸೈದ್ಧಾಂತಿಕವಾಗಿ ರಾಜಕೀಯ ವಿರೋಧಿಗಳನ್ನು ಎದುರಿಸಲಾಗದ ಬಿಜೆಪಿ ಸಿಬಿಐ ನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ವಿರೋಧ ಪಕ್ಷದ ದನಿ ಅಡಗಿಸಲು ಪ್ರಯತ್ನಿಸುತ್ತಿರುವುದಕ್ಕೆ ಈ ಪ್ರಕರಣ ಇನ್ನೊಂದು ಸಾಕ್ಷಿ,” ಎಂದು ಸಿದ್ದರಾಮಯ್ಯ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕಾಂಗ್ರೆಸ್‌ ಪಕ್ಷ ಬಿಟ್ಟು ಬಿಜೆಪಿ ಸೇರಲು ಇಚ್ಚಿಸದ ನಾಯಕರ ವಿರುದ್ದ ಕೇಂದ್ರಾಧೀನ ಸಂಸ್ಥೆಗಳಾದ ಸಿಬಿಐ, ಆದಾಯ ತೆರಿಗೆ ಇಲಾಖೆ, ಇ.ಡಿ.ಗಳ ಮೂಲಕ ಒತ್ತಡ ಹೇರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈಗ ವಿನಯ್‌ ಅವರನ್ನು ಬಂಧಿಸಿರುವುದು ಕೂಡಾ ಇದೇ ಪ್ರಯತ್ನದ ಒಂದು ಭಾಗ ಎಂದು ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಹೇಳಿದ್ದಾರೆ.

“ಇಂತಹ ಸವಾಲನ್ನು ಎದುರಿಸಿ ಗೆಲ್ಲುವ ಶಕ್ತಿಯನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ,” ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಮಾಜಿ ಸಚಿವ ವಿನಯ ಕುಲಕರ್ಣಿ ಜೊತೆ ನಾನು ಮಾತಾಡಿದ್ದೆ. ತಾನು ನಿರಪರಾಧಿ, ತನ್ನದೇನೂ ಪಾತ್ರ ಇಲ್ಲ ಎಂದು ತಿಳಿಸಿದ್ದರು. ತನಿಖೆ ಮಾಡಿದ್ದ ರಾಜ್ಯದ ಪೊಲೀಸರು ಕೂಡಾ ಯಾವುದೇ ಆರೋಪ ಹೊರಿಸಿಲ್ಲ. ಇದರಿಂದ ನಿರಾಶೆಗೀಡಾದ ಬಿಜೆಪಿ ನಾಯಕರು ಸಿಬಿಐ ಮೂಲಕ ಅವರನ್ನು ಹಣಿಯಲು ಹೊರಟಿದ್ದಾರೆ,” ಎಂದಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com