BJP ಸರ್ಕಾರದ ಕಳೆದ 15 ತಿಂಗಳ ಕಾಳಜಿ ಚುನಾವಣೆ ಗೆಲ್ಲಿಸಿತು -ಕುಮಾರಸ್ವಾಮಿ

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
BJP ಸರ್ಕಾರದ ಕಳೆದ 15 ತಿಂಗಳ ಕಾಳಜಿ ಚುನಾವಣೆ ಗೆಲ್ಲಿಸಿತು -ಕುಮಾರಸ್ವಾಮಿ

ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಬಿಜೆಪಿ ಜನತೆಗೆ ತೋರಿದ ಕಾಳಜಿಗೆ ಚುನಾವಣೆಯಲ್ಲಿ ಗೆದ್ದಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾ ಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ ಎಂದಿದ್ದಾರೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆರ್‌ಆರ್‌ ನಗರ ಹಾಗೂ ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಜೆಡಿಎಸ್‌ ತೀವ್ರ ಅಂತರದಿಂದ ಸೋಲನ್ನುಅನುಭವಿಸಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com