ಬೆಂಗಳೂರು ಬೆಂಕಿ ಅವಘಢ: ಸಂತ್ರಸ್ತರಿಗೆ ಪರಿಹಾರದ ಭರವಸೆ ನೀಡಿದ ಡಾ. ಸುಧಾಕರ್

ಜನದಟ್ಟಣೆ ಇರುವ ವಸತಿ ಪ್ರದೇಶದಲ್ಲಿ ಕಾನೂನು ಉಲಂಘಿಸಿ ಕಾರ್ಖಾನೆ ಮತ್ತು ಗೋದಾಮು ನಡೆಸುತ್ತಿರುವುದು ತನಿಖೆಯಲ್ಲಿ ಸಾಬೀತಾದಲ್ಲಿ, ಈ ಕಂಪನಿಯಿಂದ ಖರೀದಿ ಮಾಡುತ್ತಿದ್ದ ಇತರೆ ದೊಡ್ಡ ಕಂಪನಿಗಳೂ ಸೇರಿದಂತೆ ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು
ಬೆಂಗಳೂರು ಬೆಂಕಿ ಅವಘಢ: ಸಂತ್ರಸ್ತರಿಗೆ ಪರಿಹಾರದ ಭರವಸೆ ನೀಡಿದ ಡಾ. ಸುಧಾಕರ್

ಬೆಂಗಳೂರು ಬಾಪೂಜಿನಗರದ ರಾಸಾಯನಿಕ ಕಾರ್ಖಾನೆ ಗೋದಾಮಿನಲ್ಲಿ ನಡೆದ ಅಗ್ನಿ ದುರಂತ ನಡೆದ ಸ್ಥಳಕ್ಕೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಕೆ ಸುಧಾಕರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಸುಧಾಕರ್‌, ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬುಧವಾರದಂದು ಬೆಂಕಿ ಅವಘಡ ಸಂಭವಿಸಿದ್ದ ಸ್ಥಳಕ್ಕೆ ಇಂದು ಬೆಳಿಗ್ಗೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಇಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಅಕ್ರಮವಾಗಿ ಸ್ಯಾನಿಟೈಸರ್ ಉತ್ಪಾದನೆ ಮತ್ತು ಗೋದಾಮು ನಡೆಸಲಾಗುತ್ತಿತ್ತು ಎಂಬ ದೂರುಗಳಿದ್ದು, ಈಗಾಗಲೇ ಕಂಪನಿಯ ಮಾಲೀಕರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಅವಘಡದಿಂದ ಉಂಟಾಗಿರುವ ಸಾರ್ವಜನಿಕರ ಆಸ್ತಿ-ಪಾಸ್ತಿ ನಷ್ಟವನ್ನು ಬಿಬಿಎಂಪಿ ಜಂಟಿ ಆಯುಕ್ತರು ಅಂದಾಜು ಮಾಡಿ ವರದಿ ಸಲ್ಲಿಸಿದ ನಂತರ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದ ಸಚಿವರು, ಜನದಟ್ಟಣೆ ಇರುವ ವಸತಿ ಪ್ರದೇಶದಲ್ಲಿ ಕಾನೂನು ಉಲಂಘಿಸಿ ಕಾರ್ಖಾನೆ ಮತ್ತು ಗೋದಾಮು ನಡೆಸುತ್ತಿರುವುದು ತನಿಖೆಯಲ್ಲಿ ಸಾಬೀತಾದಲ್ಲಿ, ಈ ಕಂಪನಿಯಿಂದ ಖರೀದಿ ಮಾಡುತ್ತಿದ್ದ ಇತರೆ ದೊಡ್ಡ ಕಂಪನಿಗಳೂ ಸೇರಿದಂತೆ ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com