ಕರ್ನಾಟಕ: 2116 ಹೊಸ ಕರೋನಾ ಪ್ರಕರಣ ದಾಖಲು

ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,474 ಮಂದಿ ಅಸುನೀಗಿದ್ದಾರೆ.
ಕರ್ನಾಟಕ: 2116 ಹೊಸ ಕರೋನಾ ಪ್ರಕರಣ ದಾಖಲು

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್‌ 12ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 2116 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 1069 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,55,912 ತಲುಪಿದ್ದು, ಇವರಲ್ಲಿ 8,14,949 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 29,470 ಪ್ರಕರಣಗಳಲ್ಲಿ, 797 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,474 ಮಂದಿ ಅಸುನೀಗಿದ್ದಾರೆ.

Attachment
PDF
November 12.pdf
Preview

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com