ಕರ್ನಾಟಕ: 2016 ಹೊಸ ಕರೋನಾ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,57,928 ತಲುಪಿದ್ದು, ಇವರಲ್ಲಿ 8,18,392 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.
ಕರ್ನಾಟಕ: 2016 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್‌ 13ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 2016 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 1030 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,57,928 ತಲುಪಿದ್ದು, ಇವರಲ್ಲಿ 8,18,392 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 28,026 ಪ್ರಕರಣಗಳಲ್ಲಿ, 781 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,491 ಮಂದಿ ಅಸುನೀಗಿದ್ದಾರೆ.

Attachment
PDF
13 Nov 2020 Kannada.pdf
Preview

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com