ಕರ್ನಾಟಕ: 1565 ಹೊಸ ಕೋವಿಡ್‌ ಪ್ರಕರಣ ದಾಖಲು

ಸಕ್ರಿಯವಾಗಿರುವ 27,146 ಪ್ರಕರಣಗಳಲ್ಲಿ, 746 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.
ಕರ್ನಾಟಕ: 1565 ಹೊಸ ಕೋವಿಡ್‌ ಪ್ರಕರಣ ದಾಖಲು

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್‌ 15ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 1565 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 840 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,61,647 ತಲುಪಿದ್ದು, ಇವರಲ್ಲಿ 8,22,953 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 27,146 ಪ್ರಕರಣಗಳಲ್ಲಿ, 746 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,529 ಮಂದಿ ಅಸುನೀಗಿದ್ದಾರೆ.

Attachment
PDF
November 15.pdf
Preview

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com