ಕರ್ನಾಟಕ: 1157 ಹೊಸ ಕರೋನಾ ಪ್ರಕರಣಗಳು ದಾಖಲು

ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,541 ಮಂದಿ ಅಸುನೀಗಿದ್ದಾರೆ.
ಕರ್ನಾಟಕ: 1157 ಹೊಸ ಕರೋನಾ ಪ್ರಕರಣಗಳು ದಾಖಲು

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್‌ 16ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 1157 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 597 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,62,804 ತಲುಪಿದ್ದು, ಇವರಲ್ಲಿ 8,25,141 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 26,103 ಪ್ರಕರಣಗಳಲ್ಲಿ, 730 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,541 ಮಂದಿ ಅಸುನೀಗಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com