ಆಸ್ತಿ ವಿವರ ಸಲ್ಲಿಸದ BBMP ಸದಸ್ಯರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಬೇಡ: AAP ಆಗ್ರಹ

ಆಸ್ತಿ ವಿವರ ಸಲ್ಲಿಸದೇ ಇರುವ BBMP ಸದಸ್ಯರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಲೋಕಾಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದು AAP ಹೇಳಿದೆ
ಆಸ್ತಿ ವಿವರ ಸಲ್ಲಿಸದ BBMP ಸದಸ್ಯರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಬೇಡ: AAP ಆಗ್ರಹ

ಲೋಕಾಯುಕ್ತರ ಆದೇಶಕ್ಕೂ ಬೆಲೆ ಕೊಡದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಿರ್ಗಮಿತ 124 ಸದಸ್ಯರು ತಮ್ಮ ಆಸ್ತಿ ವಿವರ ಸಲ್ಲಿಸದೆ ದ್ರೋಹ ಎಸಗಿದ್ದು, ಇವರುಗಳಿಗೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2019 ರ ಆಗಸ್ಟ್‌ 28ರಂದು ಆದೇಶ ಹೊರಡಿಸಿದ್ದ ಲೋಕಾಯುಕ್ತರು, 198 ವಾರ್ಡ್‌ಗಳ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಹೇಳಿದ್ದರು. ಈ ಆದೇಶ ನೀಡಿ ಒಂದು ವರ್ಷವಾದರೂ, 124 ಸದಸ್ಯರು ಇನ್ನೂ ತಮ್ಮ ವಿವರಗಳನ್ನು ಸಲ್ಲಿಸಿಲ್ಲ ಇಂತಹ ಸದಸ್ಯರುಗಳ ಹೆಚ್ಚುವರಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಮಾತನಾಡಿ, ವರ್ಷದಿಂದ ವರ್ಷಕ್ಕೆ ಎಗ್ಗಿಲ್ಲದೆ ಹೆಚ್ಚಳವಾಗುತ್ತಿದ್ದ ಜನಪ್ರತಿನಿಧಿಗಳ ಆಸ್ತಿ ಗಳಿಕೆಯ ಬಗ್ಗೆ ಸಾಕಷ್ಟು ಅನುಮಾನ ಮೂಡಿದ್ದರಿಂದ ಜನಪ್ರತಿನಿಧಿಗಳಾಗಿ ಆರಿಸಿ ಬಂದವರು, ತಮ್ಮ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ 2009 ರಲ್ಲೇ ಜಾರಿಗೆ ಬಂದಿತ್ತು. ಆದರೆ ಈಗ ಲೋಕಾಯುಕ್ತರ ಆದೇಶಕ್ಕೆ ಕನಿಷ್ಟ ಬೆಲೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Attachment
PDF
AAP NOV 17 PRESS NOTE KANNNADA.pdf
Preview

ಚುನಾವಣೆಯ ಮುಖಾಂತರ ಜನಪ್ರತಿನಿಧಿಗಳಾಗಿ ಆರಿಸಿ ಬಂದವರು, ಪ್ರತಿ ವರ್ಷ ಜೂನ್‌ 30ರ ಒಳಗಾಗಿ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಬೇಕೆಂಬ ನಿಯಮ 2009ರಲ್ಲೇ ರೂಪಿತವಾಗಿತ್ತು. ಒಂದು ದಶಕದಷ್ಟು ಸಮಯ ಕಳೆದರೂ, ಈ ನಿಯಮವನ್ನು ಕಠಿಣವಾಗಿ ಜಾರಿಗೆ ಬರುವುದರಲ್ಲೇ ಇದೆ. ಕಾನೂನಿನ ಭಯವಿಲ್ಲದ, ಆಸ್ತಿ ವಿವರ ಸಲ್ಲಿಸದ 124 ನಿರ್ಗಮಿತ ಸದಸ್ಯರ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಹಾಗೂ ಲೋಕಾಯುಕ್ತ ಸಂಸ್ಥೆಗೆ ಆಗ್ರಹಿಸಿದ ಅವರು, ಆಸ್ತಿ ವಿವರ ಸಲ್ಲಿಸದ ನಿರ್ಗಮಿತ ಬಿಬಿಎಂಪಿ ಸದಸ್ಯರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ತಾಕತ್ತಿದೆಯೇ ಎಂದು ಇದೇ ಸಂಧರ್ಭದಲ್ಲಿ ಪ್ರಶ್ನಿಸಿದ್ದಾರೆ.

ಆಸ್ತಿ ವಿವರ ಸಲ್ಲಿಸದೇ ಇರುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಲೋಕಾಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ ಅವರು, ವಿಪರ್ಯಾಸ ಎಂದರೆ ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ಮೊದಲನೇ ಸ್ಥಾನಕ್ಕೆ ಏರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ, ಲೋಕಾಯುಕ್ತ ಸಂಸ್ಥೆ ಹಾಳು ಗೆಡವಿ, ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪಿಸಿ ಸರ್ಕಾರಿ ಕಚೇರಿಗಳನ್ನು ಭ್ರಷ್ಟರ ಕೂಪ ಮಾಡಿದ್ದೆ ಸಾಧನೆ ಎಂದು ಟೀಕಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com