ಸಂಪುಟ ವಿಸ್ತರಣೆ: ಹೈಕಮಾಂಡ್ ಭೇಟಿಯಲ್ಲಿ ಸಿಎಂ ಯಡಿಯೂರಪ್ಪ

ಕರ್ನಾಟಕ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದಿದೆ. ಹೀಗಿರುವಾಗ ಯಾವುದೇ ಸಮಸ್ಯೆಯಾಗದಂತೆ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ಮಾಡಬೇಕು ಎಂದು ಸಿಎಂ ಯಡಿಯೂರಪ್ಪ ಪಣತೊಟ್ಟಿದ್ದಾರೆ.
ಸಂಪುಟ ವಿಸ್ತರಣೆ: ಹೈಕಮಾಂಡ್ ಭೇಟಿಯಲ್ಲಿ ಸಿಎಂ ಯಡಿಯೂರಪ್ಪ

ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗಲಿದೆ. ಹೀಗಾಗಿಯೇ ಸಿಎಂ ಬಿಎಸ್‌ ಯಡಿಯೂರಪ್ಪನವರು ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಚರ್ಚೆ ನಡೆಸುವ ಸಲುವಾಗಿ ದೆಹಲಿಗೆ ಭೇಟಿ ನೀಡಿದ್ದು, ಬಿಹಾರ ಚುನಾವಣೆ ಮುಗಿದು ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಿರುವ ಕಾರಣ ಕೇಂದ್ರ ಬಿಜೆಪಿ ನಾಯಕರು ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್‌ ಸಿಗ್ನಲ್‌ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಅವರು ಈಗಾಗಲೇ ಅಧಿಕಾರ ಸ್ವೀಕರಿಸಿದ್ದಾರೆ. ಹೀಗಾಗಿ ಸದ್ಯ ಬಿಹಾರದಲ್ಲಿ ಯಾವುದೇ ಗೊಂದಲ ಇಲ್ಲದ ಕಾರಣ ಕೇಂದ್ರ ಬಿಜೆಪಿ ನಾಯಕರು ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆಗೆ ದಿನಾಂಕ ನೀಡಲಿದ್ದಾರೆ. ಹಾಗಾಗಿಯೇ ಸಚಿವಾಕಾಂಕ್ಷಿಗಳ ಪಟ್ಟಿಯೊಂದಿಗೆ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ ಎನ್ನುತ್ತಿವೆ ಸಿಎಂ ಆಪ್ತ ಮೂಲಗಳು.

ಹೇಗಾದರೂ ಸರಿಯೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಮತ್ತಿತ್ತರ ಕೇಂದ್ರ ನಾಯಕರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆದುಕೊಂಡು ಬರಲೇಬೇಕು. ಕರ್ನಾಟಕ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದಿದೆ. ಹೀಗಿರುವಾಗ ಯಾವುದೇ ಸಮಸ್ಯೆಯಾಗದಂತೆ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ಮಾಡಬೇಕು ಎಂದು ಸಿಎಂ ಯಡಿಯೂರಪ್ಪ ಪಣತೊಟ್ಟಿದ್ದಾರೆ.

ಸಂಪುಟ ವಿಸ್ತರಣೆ: ಹೈಕಮಾಂಡ್ ಭೇಟಿಯಲ್ಲಿ ಸಿಎಂ ಯಡಿಯೂರಪ್ಪ
ಸಂಪುಟ ಪುನರ್ ರಚನೆ ನೆಪದಲ್ಲಿ ಕುರ್ಚಿ ಮತ್ತು ಪುತ್ರನ ಉಳಿವಿಗಾಗಿ BSY ದೆಹಲಿ ಯಾತ್ರೆ

ದೆಹಲಿಗೆ ಯಡಿಯೂರಪ್ಪ ತೆರಳಿರುವುದರಿಂದ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಸಂತಸ ಮೂಡಿದೆ. ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎಂಬುದು ವರಿಷ್ಠರ ತೀರ್ಮಾನ. ಒಂದು ವೇಳೆ ಸಚಿವ ಸಂಪುಟ ಪುನರ್ ರಚನೆಯಾದರೆ ಯಾರನ್ನು ಕೈ ಬಿಡಬೇಕು, ಯಾರನ್ನು ಸೇರಿಸಿಕೊಳ್ಳಬೇಕು? ಎಂಬುದರ ಬಗ್ಗೆ ಮಾತ್ರ ಇನ್ನೂ ಅಂತಿಮವಾಗಿಲ್ಲ. ಆದರೆ, ಹೈಕಮಾಂಡ್‌ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ತೋರುವ ಸಾಧ್ಯತೆ ಇರುವುದರಿಂದ ನಾನು ಸೂಚಿಸುವ ಸಚಿವರು ರಾಜೀನಾಮೆ ನೀಡಲು ಸಿದ್ಧವಿರಿ ಎಂದು ಎಲ್ಲರಿಗೂ ಸಿಎಂ ಸೂಚನೆ ನೀಡಿದ್ದಾರೆ ಎನ್ನುತ್ತಿವೆ ಉನ್ನತ ಮೂಲಗಳು.

ಸದ್ಯ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಹೆಚ್ ವಿಶ್ವನಾಥ್ ಹಾಗೂ ಆರ್ ಶಂಕರ್ ಮತ್ತು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಮಂತ್ರಿ ಸ್ಥಾನ ನೀಡಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸದ್ಯ ರಾಜ್ಯ ಸಚಿವ ಸಂಪುಟದಲ್ಲಿ ಸಿಎಂ ಸೇರಿದಂತೆ 34 ಮಂದಿ ಬಲವಿದೆ. ಇನ್ನೂ 7 ಸ್ಥಾನಗಳು ಖಾಲಿ ಉಳಿದಿವೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com