ಕರ್ನಾಟಕ: 1781 ಹೊಸ ಕರೋನಾ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,69,561 ತಲುಪಿದ್ದು, ಇವರಲ್ಲಿ 8,33,169 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ
ಕರ್ನಾಟಕ: 1781 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್‌ 20 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 1781 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರ ನಗರದಲ್ಲಿ 1067 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,69,561 ತಲುಪಿದ್ದು, ಇವರಲ್ಲಿ 8,33,169 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 24,752 ಪ್ರಕರಣಗಳಲ್ಲಿ, 539 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11621 ಮಂದಿ ಅಸುನೀಗಿದ್ದಾರೆ.

Attachment
PDF
20-11-2020 HMB Kannada.pdf
Preview

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com