ಸಂಪುಟ ವಿಸ್ತರಣೆಗೆ ಹೈಕಮಾಂಡ್‌ನಿಂದ ಶೀಘ್ರದಲ್ಲೇ ಗ್ರೀನ್ ಸಿಗ್ನಲ್ -BSY

ಬಿಜೆಪಿ ಹೈಕಮಾಂಡ್,‌ ಮೂರು ದಿನಗಳ ನಂತರ ಸಂಪುಟ ವಿಸ್ತರಣೆ ಕುರಿತ ನಿರ್ಧಾರ ತಿಳಿಸುವುದಾಗಿ ಭರವಸೆ ನೀಡಿದ ಪರಿಣಾಮ ಸಿಎಂ ಬರಿಗೈನಲ್ಲೇ ದೆಹಲಿಯಿಂದ ಬೆಂಗಳೂರಿಗೆ ವಾಪಸ್ಸಾಗಿದ್ದರು
ಸಂಪುಟ ವಿಸ್ತರಣೆಗೆ ಹೈಕಮಾಂಡ್‌ನಿಂದ ಶೀಘ್ರದಲ್ಲೇ ಗ್ರೀನ್ ಸಿಗ್ನಲ್ -BSY

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರೊಂದಿಗೆ ಚರ್ಚಿಸಿ ಬಂದಿದ್ದೇನೆ. ಮುಂದಿನ ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಗೆ ಗ್ರೀನ್‌ ಸಿಗ್ನಲ್‌ ಸಿಗುವ ಸಾಧ್ಯತೆ ಇದೆ. ಹೈಕಮಾಂಡ್‌ನಿಂದಲೇ ಸಚಿವರ ಪಟ್ಟಿಯೂ ಬರಬಹುದು ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 'ಹೊಯ್ಸಳ ಕ್ಯಾಬ್' ಸೇವೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತಾಡಿದ ಸಿಎಂ ಬಿಎಸ್‌ ಯಡಿಯೂರಪ್ಪ ಹೀಗೆಂದರು. ಸಂಪುಟ ವಿಸ್ತರಣೆಗೆ ಹೈಕಮಾಂಡ್‌ನಿಂದಲೇ ಪಟ್ಟಿ ಬರಲಿದೆ. ಪಟ್ಟಿ ಬಂದ ನಂತರ ಸಂಪುಟ ವಿಸ್ತರಣೆ ಪ್ರಕ್ರಿಯೆ ಶುರು ಮಾಡಲಿದ್ದೇನೆ ಎಂದು ಮಾಹಿತಿ ನೀಡಿದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇತ್ತೀಚೆಗೆ ಎರಡು ದಿನಗಳ ಹಿಂದೆ ಸಚಿವ ಸಂಪುಟದ ವಿಸ್ತರಣೆಗೆ ಅನುಮತಿ ಕೋರಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿಯಾಗಿ ಚರ್ಚಿಸಿದ್ದರು. ಈ ವೇಳೆ ಬಿಜೆಪಿ ಹೈಕಮಾಂಡ್‌ ಮೂರು ದಿನಗಳ ನಂತರ ಇದರ ಕುರಿತ ನಿರ್ಧಾರ ತಿಳಿಸುವುದಾಗಿ ಭರವಸೆ ನೀಡಿದ ಪರಿಣಾಮ ಸಿಎಂ ಬರಿಗೈನಲ್ಲೇ ದೆಹಲಿಯಿಂದ ಬೆಂಗಳೂರಿಗೆ ವಾಪಸ್ಸಾಗಿದ್ದರು.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ನಾಲ್ವರು ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕು. ಹಾಗೆಯೇ ಐವರು ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು, ಕೆಲಸ ಮಾಡುವ ಶಾಸಕರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ಸಿಎಂ ಯಡಿಯೂರಪ್ಪ ಅವರ ಪ್ರಸ್ತಾಪ.

ಸಂಪುಟ ವಿಸ್ತರಣೆಗೆ ಹೈಕಮಾಂಡ್‌ನಿಂದ ಶೀಘ್ರದಲ್ಲೇ ಗ್ರೀನ್ ಸಿಗ್ನಲ್ -BSY
ಸಂಪುಟ ವಿಸ್ತರಣೆಗೆ ದೆಹಲಿ ಭೇಟಿ: ಬರಿಗೈಲಿ ಹಿಂದಿರುಗಿದ ಯಡಿಯೂರಪ್ಪ

ಇನ್ನು, ಸಿಎಂ ಯಡಿಯೂರಪ್ಪ ಅವರ ಪ್ರಸ್ತಾಪ ಕುರಿತು ತೀರ್ಮಾನ ತೆಗೆದುಕೊಳ್ಳಲು ಬಿಜೆಪಿ ಹೈಕಮಾಂಡ್‌ ಸಮಯಾವಕಾಶ ಕೋರಿದೆ. ರಾಜ್ಯ ನೂತನ ಉಸ್ತುವಾರಿ ಅರುಣ್‌ ಸಿಂಗ್‌ ಅವರಿಗೆ ಬೆಂಗಳೂರಿಗೆ ಹೋಗಿ ಕೂಡಲೇ ರಾಜ್ಯ ಬಿಜೆಪಿ ನಾಯಕರೊಂದಿಗೆ ಚರ್ಚಿಸುವಂತೆ ಹೈಕಮಾಂಡ್‌ ಸೂಚನೆ ನೀಡಿದೆನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಬುಧವಾರ ದೆಹಲಿಗೆ ತೆರಳಿದ್ದರು. ಅಂದು ಸಂಜೆ ಬಿಜೆಪಿ ಹೈಕಮಾಂಡ್ ಜೆ.ಪಿ ನಡ್ಡಾರನ್ನು ಜನಪಥ್ ರಸ್ತೆಯಲ್ಲಿರುವ ನಿವಾಸದಲ್ಲಿ ಭೇಟಿಯಾಗಿದ್ದರು.

ಸದ್ಯ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಹೆಚ್ ವಿಶ್ವನಾಥ್ ಹಾಗೂ ಆರ್ ಶಂಕರ್ ಮತ್ತು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಮಂತ್ರಿ ಸ್ಥಾನ ನೀಡಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸದ್ಯ ರಾಜ್ಯ ಸಚಿವ ಸಂಪುಟದಲ್ಲಿ ಸಿಎಂ ಸೇರಿದಂತೆ 34 ಮಂದಿ ಬಲವಿದೆ. ಇನ್ನೂ 7 ಸ್ಥಾನಗಳು ಖಾಲಿ ಉಳಿದಿವೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com