ಸಿಗಂದೂರು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿಸುವ ಕುರಿತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ದೇವಸ್ಥಾನದಲ್ಲಿ ಬರುವ ಆದಾಯಗಳಿಗೆ ಪಾರದರ್ಶಕತೆ ತರುವ ಸಲುವಾಗಿ ಮುಜುರಾಯಿ ಇಲಾಖೆಗೆ ಸೇರಿಸುವಂತೆ ಹೈಕೋರ್ಟ್ ನಲ್ಲಿ PIL ಹೂಡಲಾಗಿತ್ತು
ಸಿಗಂದೂರು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿಸುವ ಕುರಿತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಸಿಗಂದೂರು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಸಿಗಂದೂರು ದೇವಾಲಯಕ್ಕೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಚನೆಗೊಂಡಿರುವ ಮೇಲುಸ್ತುವಾರಿ ಹಾಗೂ ಸಲಹಾ ಸಮಿತಿಯನ್ನ ರದ್ದುಗೊಳಿಸಿ ಎಂದು ನಡೆಯುತ್ತಿರುವ ಹೋರಾಟದ ಮಧ್ಯೆ ಹೈಕೋರ್ಟ್ ದೇವಸ್ಥಾನವನ್ನು ಮುಜುರಾಯಿಗೆ ಸೇರಿಸುವ ಕುರಿತು ಸರ್ಕಾರಕ್ಕೆ ನೋಟೀಸ್ ನೀಡಿದೆ.

ಸಿಗಂದೂರು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿಸುವ ಕುರಿತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ಸಿಗಂದೂರಿನಲ್ಲಿ ಭಾರೀ ಅಭಯಾರಣ್ಯ ಒತ್ತುವರಿಗೆ ಅರಣ್ಯ ಇಲಾಖೆಯ ಮೌನವೇ ಉತ್ತರ?

ತುಮರಿ ನಿವಾಸಿ ಲಕ್ಷ್ಮೀ ನಾರಾಯಣ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದು ದೇವಸ್ಥಾನದ ನಿರ್ಮಾಣದ ವೇಳೆ ಹಾಗೂ ತದನಂತರದ ಅಭಿವೃದ್ಧಿಯಲ್ಲಿ ಅರಣ್ಯ ಭೂಮಿಯನ್ನ ಒತ್ತುವರಿ ಮಾಡಿಕೊಳ್ಳಲಾಗಿದೆ ಹಾಗೂ ದೇವಸ್ಥಾನದಲ್ಲಿ ಬರುವ ಆದಾಯಗಳಿಗೆ ಪಾರದರ್ಶಕತೆ ತರುವ ಸಲುವಾಗಿ ಮುಜುರಾಯಿ ಇಲಾಖೆಗೆ ಸೇರಿಸುವಂತೆ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದರು.

ಸಿಗಂದೂರು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿಸುವ ಕುರಿತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ಸಿಗಂದೂರು ಉಸ್ತುವಾರಿಗೆ ಡಿಸಿ ಸಮಿತಿ: ಪರಿಸರ ಧ್ವಂಸಕ್ಕೂ ಬೀಳಬೇಕಿದೆ ಬ್ರೇಕ್!

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಅರಣ್ಯ ಭೂಮಿ ಒತ್ತುವರಿ ಕುರಿತು ಎರಡು ವಾರದಲ್ಲಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಹಾಗೂ ಮುಜರಾಯಿ ಇಲಾಖೆಗೆ ದೇವಸ್ಥಾನವನ್ನು ಸೇರಿಸುವ ಕುರಿತು ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.

ಸಿಗಂದೂರು ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿಸುವ ಕುರಿತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲಿ ತಟ್ಟೆಕಾಸಿನ ಬಿರುಗಾಳಿ!

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com