ಕರೋನಾ: ಹಲವು ತಿಂಗಳ ಬಳಿಕ ರಾಜ್ಯದಲ್ಲಿ ಸಾವಿರದ ಕೆಳಗಿಳಿದ ಹೊಸ ಪ್ರಕರಣಗಳ ಸಂಖ್ಯೆ

ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,778 ಮಂದಿ ಅಸುನೀಗಿದ್ದಾರೆ.
ಕರೋನಾ: ಹಲವು ತಿಂಗಳ ಬಳಿಕ ರಾಜ್ಯದಲ್ಲಿ ಸಾವಿರದ ಕೆಳಗಿಳಿದ ಹೊಸ ಪ್ರಕರಣಗಳ ಸಂಖ್ಯೆ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್‌ 30ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 998 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 444 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,84,897 ತಲುಪಿದ್ದು, ಇವರಲ್ಲಿ 8,49,821 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 23,279 ಪ್ರಕರಣಗಳಲ್ಲಿ, 349 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,778 ಮಂದಿ ಅಸುನೀಗಿದ್ದಾರೆ.

Attachment
PDF
30-11-2020 HMB Kannada.pdf
Preview

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com