ಕರ್ನಾಟಕ: ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆ

ರಾಜ್ಯದ 30 ಜಿಲ್ಲೆಗಳ 5,762 ಗ್ರಾಮ ಪಂಚಾಯತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಿಗದಿ ಪಡಿಸಲಾಗಿದೆ. ಮೊದಲ ಹಂತದಲ್ಲಿ 2,930 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ
ಕರ್ನಾಟಕ: ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆ

ಬಹುನಿರೀಕ್ಷಿತ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದೆ. ರಾಜ್ಯದ 5762 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗುತ್ತಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಒಂದು ಸಾವಿರ ಮತದಾರರಿಗೆ ಒಂದು ಮತಗಟ್ಟೆಯಂತೆ ಸ್ಥಾಪಿಸಲಾಗಿದೆ. ಡಿಸೆಂಬರ್ 22ರಂದು ಮೊದಲನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 27 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತಂತೆ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಚುನಾವಣಾ ಆಯೋಗ ಮುಖ್ಯಸ್ಥರು, ರಾಜ್ಯದ 30 ಜಿಲ್ಲೆಗಳ 5,762 ಗ್ರಾಮ ಪಂಚಾಯತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಿಗದಿ ಪಡಿಸಲಾಗಿದೆ. ಮೊದಲ ಹಂತದಲ್ಲಿ 2,930 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ

ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನದ ನಂತರ ಮರು ಮತದಾನದ ಅವಶ್ಯಕತೆ ಇದ್ದಲ್ಲಿ, ಮೊದಲ ಹಂತದ ಚುನಾವಣೆಗೆ ಡಿಸೆಂಬರ್ 24ರಂದು ಮರು ಮತದಾನ ನಡೆಯಲಿದೆ. ಎರಡನೇ ಹಂತದ ಚುನಾವಣೆಗಳಿಗೆ ಮರು ಮತದಾನ ಡಿ.29 ರಂದು ನಡೆಯಲಿದೆ. ಇದೇ ಮೊದಲ ಬಾರಿಗೆ ಬೀದರ್ ಜಿಲ್ಲೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸಿಕೊಂಡು ಚುನಾವಣೆ ನಡೆಯಲಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com