ಕರ್ನಾಟಕ: ವೈದ್ಯಕೀಯ, ಅರೆವೈದ್ಯಕೀಯ ಕಾಲೇಜುಗಳು ಪುನರಾರಂಭ

ಕೋವಿಡ್ -19 ಮಾರ್ಗಸೂಚಿಗಳನ್ನು ಅನುಸರಿಸಿ ದಂತ, ಆಯುಷ್, ಪ್ಯಾರಾಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳು ಇಂದಿನಿಂದ ನಿಯಮಿತ ತರಗತಿಗಳನ್ನು ಪುನರಾರಂಭಿಸಿವೆ.
ಕರ್ನಾಟಕ: ವೈದ್ಯಕೀಯ, ಅರೆವೈದ್ಯಕೀಯ ಕಾಲೇಜುಗಳು ಪುನರಾರಂಭ
ಸಾಂಧರ್ಭಿಕ ಚಿತ್ರ

ಕರೋನವೈರಸ್ ಹರಡುವಿಕೆ ತಡೆಯಲು ಏಕಾಏಕಿ ಲಾಕ್‌ಡೌನ್ ಹೇರಿದ ಬರೋಬ್ಬರಿ ಒಂಬತ್ತು ತಿಂಗಳು ನಂತರ ಕರ್ನಾಟಕದ ಎಲ್ಲಾ ವೈದ್ಯಕೀಯ ಮತ್ತು ಅರೆವೈದ್ಯಕೀಯ ಕಾಲೇಜುಗಳು ಮಂಗಳವಾರ ಮತ್ತೆ ತೆರೆಯಲ್ಪಟ್ಟಿದೆ.

ಕೋವಿಡ್ -19 ಮಾರ್ಗಸೂಚಿಗಳನ್ನು ಅನುಸರಿಸಿ ಪ್ಯಾರಾಮೆಡಿಕಲ್, ಆಯುಷ್, ದಂತ, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳು ಇಂದಿನಿಂದ ನಿಯಮಿತ ತರಗತಿಗಳನ್ನು ಪುನರಾರಂಭಿಸಿವೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಡಿಸೆಂಬರ್ 1 ರಿಂದ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಆದೇಶಿಸಿದ್ದರು.

ಈಗಾಗಲೇ ಪದವಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಕಾಲೇಜುಗಳು ನಿಯಮಿತವಾಗಿ ನವೆಂಬರ್ 17 ರಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಿದ್ದವು.

ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮೂಲಗಳ ಪ್ರಕಾರ, ವೈದ್ಯಕೀಯ ಕಾಲೇಜುಗಳಲ್ಲಿ ಫೇಸ್ ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳುವುದು ಮುಂತಾದ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ.

ತರಗತಿಗಳಿಗೆ ಹಾಜರಾಗಲು ಬೋಧಕವರ್ಗ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ನಕಾರಾತ್ಮಕ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ತಯಾರಿಸಲು ತಿಳಿಸಲಾಗಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com