ಕುಮಾರಸ್ವಾಮಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಸರ್ಕಾರ ರಚನೆ ಮಾಡುವಂತೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದ್ದು, ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ಮಾಡಿದ್ದು ಕಾಂಗ್ರೆಸ್ ಹೈಕಮಾಂಡ್, ನಾನಲ್ಲ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ಸರಣಿ ಟ್ವೀಟ್‌ಗಳ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ದ ತಿರುಗಿ ಬಿದ್ದಿದ್ದಾರೆ.

ವಿಧಾನ ಪರಿಷತ್ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ಸರ್ಕಾರ ನಿರ್ಧರಿಸಿದೆ. ನಮ್ಮದು ಜಾತ್ಯಾತೀತ ಪಕ್ಷ ಎನ್ನುವ ಜೆಡಿಎಸ್ ಕೋಮುವಾದಿಗಳ ಪರವಾಗಿ ಮತ ಚಲಾಯಿಸುತ್ತದೋ, ವಿರುದ್ಧವಾಗಿ ಮತ ಚಲಾಯಿಸುತ್ತದೋ ಎಂಬುದನ್ನು ನೋಡಲು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ಈಗಲೇ ರಾಜೀನಾಮೆ ನೀಡದಂತೆ ಹೇಳಿದ್ದೇನೆ, ಎಂದು ಸಿದ್ದರಾಂಯ್ಯ ಟ್ವೀಟ್‌ ಮಾಡಿದ್ದಾರೆ.

“ಸಮ್ಮಿಶ್ರ ಸರ್ಕಾರ ಬಂದಮೇಲೆ ತನ್ನ ಗೌರವ ಹಾಳಾಯ್ತು ಎಂಬ ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದವಾಗಿದೆ. ಕುಮಾರಸ್ವಾಮಿಗೆ ಒಳ್ಳೆ ಇಮೇಜ್ ಇದ್ದದ್ದೇ ಆದರೆ ಹಿಂದಿನ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷ ಗೆಲ್ಲುವ ಸ್ಥಾನಗಳ ಸಂಖ್ಯೆ ಏರಿಕೆಯಾಗುತ್ತಿತ್ತೇ ಹೊರತು ಕಡಿಮೆಯಾಗುತ್ತಿರಲಿಲ್ಲ,” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

2004ರಲ್ಲಿ ನಾನು ಜೆಡಿಎಸ್ ನಲ್ಲಿದ್ದಾಗ ಜಿಡಿಎಸ್ 59 ಸ್ಥಾನಗಳನ್ನು ಗೆದ್ದಿತ್ತು, ನನ್ನನ್ನು ಪಕ್ಷದಿಂದ ವಜಾಗೊಳಿಸಿದ ನಂತರದ ಚುನಾವಣೆಯಲ್ಲಿ 28 ಸ್ಥಾನ, 2013 ರ ಚುನಾವಣೆಯಲ್ಲಿ 40 ಸ್ಥಾನ, ಕಳೆದ ಚುನಾವಣೆಯಲ್ಲಿ 37 ಸ್ಥಾನ ಗೆದ್ದಿತ್ತು. ಕುಮಾರಸ್ವಾಮಿ ಜನರ ಬಳಿ ಗೌರವ ಉಳಿಸಿಕೊಂಡಿದ್ದರೆ 59 ರಿಂದ 28 ಸ್ಥಾನಕ್ಕೆ ಬರುತ್ತಿತ್ತೇ? ಎಂದು ಸಿದ್ದರಾಂಯ್ಯ ಪ್ರಶ್ನಿಸಿದ್ದಾರೆ.

ಜೆಡಿಎಸ್ ನವರ ರಾಜಕೀಯ ವಿರೋಧಿ ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಅಲ್ಲ. ಅವರು ಬಿಜೆಪಿ ಬಗ್ಗೆ ಸದಾಕಾಲ ಮೃದು ಧೋರಣೆ ಹೊಂದಿದ್ದಾರೆ. ನಿನ್ನೆ ಕುಮಾರಸ್ವಾಮಿ ಅವರು ತಾವು ಬಿಜೆಪಿಗೆ ಹೋಗಿದ್ದರೆ 5 ವರ್ಷ ಮುಖ್ಯಮಂತ್ರಿ ಆಗಿರುತ್ತಿದ್ದೆ ಎಂದು ಹೇಳಿರುವುದೇ ಇದಕ್ಕೆ ಸಾಕ್ಷಿ. ಇದೇ ಕಾರಣಕ್ಕೆ ನಾನು ಜೆಡಿಎಸ್ ಅನ್ನು ಬಿಜೆಪಿಯ 'ಬಿ ಟೀಮ್' ಎನ್ನುವುದು, ಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಸರ್ಕಾರ ರಚನೆ ಮಾಡುವಂತೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದ್ದು, ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ಮಾಡಿದ್ದು ಕಾಂಗ್ರೆಸ್ ಹೈಕಮಾಂಡ್, ನಾನಲ್ಲ. 37 ಸ್ಥಾನ ಗೆದ್ದವರಿಗೆ ಮುಖ್ಯಮಂತ್ರಿ ಹುದ್ದೆ ನೀಡಿದ್ದರು, ಇದರಲ್ಲಿ ಟ್ರ್ಯಾಪಿಂಗ್ ಎಲ್ಲಿಂದ ಬಂತು? ಎಂದು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com