ಕೋಲಾರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರೈತರಿಗೆ ಜೆಡಿಎಸ್ ಯಾವುದೇ ದ್ರೋಹ ಮಾಡುವುದಿಲ್ಲ. ನಾನು ಸಿಎಂ ಆಗಿದ್ದಾಗ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೆ. ಆಗ ಯಾವ ರೈತ ಮುಖಂಡರು ಅನುಕೂಲವಾಗಿದೆ ಎಂದು ಹೇಳಲಿಲ್ಲ. ಭೂ ಸುಧಾರಣಾ ಕಾಯ್ದೆಯಲ್ಲಿ ಕೆಲ ಮಾರಕ ಅಂಶಗಳನ್ನ ತೆಗೆಯಲಾಗಿದೆ. ಭೂಸುಧಾರಣಾ ಕಾಯ್ದೆ ಬಗ್ಗೆ ರೈತ ಮುಖಂಡರು ತಿಳಿದುಕೊಳ್ಳಲಿ ಎಂದು ಸಲಹೆ ನೀಡಿದರು.
ಇದರೊಂದಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ದ ಕಿಡಿಕಾರಿರುವ ಕುಮಾರಸ್ವಾಮಿ ಅವರು, ಅವರು ಎಲ್ಲಿಂದ ಬಂದರು ಹೇಗೆ ಬಂದರು ಎಂಬುದು ನನಗೆ ಚೆನ್ನಾಗಿ ತಿಳಿದಿದೆ, ಎಂದು ಹೇಳಿದ್ದಾರೆ.
ಇನ್ನು ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ರೈತರು ನಡೆಸಿದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಾಲ್ಗೊಂಡಿದ್ದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ವ್ಯಾಲ್ಯೂ ಇಲ್ಲ. ಹೀಗಾಗಿ ಕಾಂಗ್ರೆಸ್ ಶಾಲು ಬಿಟ್ಟು ಹಸಿರು ಶಾಲು ಹಾಕಿಕೊಂಡು ಬಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.