ದೆಹಲಿ ರೈತರ ಪ್ರತಿಭಟನೆಗೆ ಬೆಂಬಲ: ಅನಿರ್ದಿಷ್ಟಾವಧಿ ಧರಣಿ ಕೈಗೊಂಡ ಐಕ್ಯ ಹೋರಾಟ ಸಮಿತಿ

ಕೇಂದ್ರ ಸರ್ಕಾರ ಮುಂಗಾರು ಅಧಿವೇಶನದಲ್ಲಿ ಜಾರಿಗೆ ತಂದಿದ್ದ ಮೂರು ಕೃಷಿ ಕಾಯದೆ ತಿದ್ದುಪಡಿ, ವಿದ್ಯುತ್‌ ಕಾಯ್ದೆ ತಿದ್ದುಪಡಿಯನ್ನು ವಾಪಾಸ್‌ ಪಡೆಯಬೇಕೆಂದು ಐಕ್ಯ ಹೋರಾಟ ಸಮಿತಿ ಆಗ್ರಹಿಸಿದೆ.
ದೆಹಲಿ ರೈತರ ಪ್ರತಿಭಟನೆಗೆ ಬೆಂಬಲ: ಅನಿರ್ದಿಷ್ಟಾವಧಿ ಧರಣಿ ಕೈಗೊಂಡ ಐಕ್ಯ ಹೋರಾಟ ಸಮಿತಿ

ದೆಹಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ರೈತ ದಲಿತ ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ವತಿಯಿಂದ ಮೌರ್ಯ ವೃತ್ತದ ಬಳಿ ಅನಿರ್ದಿಷ್ಟ ಧರಣಿಯನ್ನು ಆರಂಭಿಸಲಾಗಿದೆ.

ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಜಾರಿಗೆ ತಂದ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಧರಣೆಯನ್ನು ಈ ಹಿಂದೆ ಕೈಗೊಳ್ಳಲಾಗಿತ್ತು. ಮೌರ್ಯ ವೃತ್ತದಲ್ಲಿ ವಾಹನ ಸಂಚಾರವನ್ನು ತಡೆದು, ತೀವ್ರ ಆಕ್ರೋಶವನ್ನೂ ವ್ಯಕ್ತಪಡಿಸಲಾಗಿತ್ತು.

ನಂತರ, ರಾಜ್ಯಪಾಲರನ್ನು ಭೇಟಿ ಮಾಡಿದ್ದ ಐಕ್ಯ ಹೋರಾಟ ಸಮಿತಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಅಂಕಿತ ಹಾಕದಂತೆ ಹಕ್ಕು ಪತ್ರವನ್ನು ಸಲ್ಲಿಸಿತ್ತು. ರಾಜ್ಯಪಾಲರು ಸರ್ಕಾರಕ್ಕೆ ನಿರ್ದೇಶಣವನ್ನು ನೀಡುವ ಭರವಸೆ ನೀಡಿದ್ದರಿಂದ ಅನಿರ್ದಿಷ್ಟಾವಧಿ ಮುಷ್ಕರನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು.

ಈಗ ದೆಹಲಿ ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರವು ಕಿವಿಗೊಡದ ಕಾರಣಕ್ಕೆ ಮತ್ತೆ ಹೋರಾಟವನ್ನು ಮುಂದುವರೆಸಲಾಗಿದೆ. ಕೇಂದ್ರ ಸರ್ಕಾರ ಮುಂಗಾರು ಅಧಿವೇಶನದಲ್ಲಿ ಜಾರಿಗೆ ತಂದಿದ್ದ ಮೂರು ಕೃಷಿ ಕಾಯದೆ ತಿದ್ದುಪಡಿ, ವಿದ್ಯುತ್‌ ಕಾಯ್ದೆ ತಿದ್ದುಪಡಿಯನ್ನು ವಾಪಾಸ್‌ ಪಡೆಯಬೇಕೆಂದು ಐಕ್ಯ ಹೋರಾಟ ಸಮಿತಿ ಆಗ್ರಹಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ


ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ಪ್ರಕಾಶ್ ಕಮ್ಮರಡಿ, ಬಸವರಾಜು ಗುರುಪ್ರಸಾದ್ ಕೆರೆಗೋಡು, ಕಾಳಪ್ಪ ಮತ್ತಿತರರು ಇದ್ದರು

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com