ಹಂಪಿ ವಿವಿ ಉಳಿಸಿಕೊಳ್ಳಲು ಕರವೇಯಿಂದ ಟ್ವಿಟರ್‌ ಅಭಿಯಾನ

ರಾಜ್ಯ ಸರ್ಕಾರದ ಬಳಿ ವೋಟ್ ಬ್ಯಾಂಕ್ ರಾಜಕಾರಣ‌ ನಡೆಸುವ ಉದ್ದೇಶದಿಂದ ಹೊಸಹೊಸ ಪ್ರಾಧಿಕಾರ ಸ್ಥಾಪಿಸಲು ಹಣವಿದೆ. ಆದರೆ ಏಕೈಕ ಕನ್ನಡ ವಿವಿಗೆ ಕೊಡಲು ಹಣವಿಲ್ಲವೆಂದರೆ ಹೇಗೆ? ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಪ್ರಶ್ನಿಸಿದ್ದಾರೆ.
ಹಂಪಿ ವಿವಿ ಉಳಿಸಿಕೊಳ್ಳಲು ಕರವೇಯಿಂದ ಟ್ವಿಟರ್‌ ಅಭಿಯಾನ

ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಒದಗಿಸದೆ ರಾಜ್ಯ ಸರ್ಕಾರ ನಿಧಾನ ವಿಷವುಣಿಸಿ ಕೊಲ್ಲುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯು. ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಲು ಟ್ವಿಟರ್ ಅಭಿಯಾನವನ್ನು ಹಮ್ಮಿಕೊಂಡಿದೆ.

#ಕನ್ನಡವಿವಿಉಳಿಸಿ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ರಾಜ್ಯ ಸರ್ಕಾರದ ತಾತ್ಸಾರ ಧೋರಣೆಯನ್ನು ಖಂಡಿಸಿ ಎಲ್ಲ ಕನ್ನಡಿಗರು ಸಂಜೆ 5 ಗಂಟೆಯಿಂದ ಟ್ವೀಟ್ ಮಾಡಬೇಕೆಂದು ಕರವೇ ಕೋರಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ


“ಕನ್ನಡ ನುಡಿ, ಸಾಹಿತ್ಯ, ಪರಂಪರೆಗಾಗಿ ಮೀಸಲಾದ ಏಕೈಕ ವಿಶ್ವವಿದ್ಯಾಲಯ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿರುವ ಹಂಪಿ ವಿಶ್ವವಿದ್ಯಾಲಯ. ವರ್ಷಕ್ಕೆ ಆರು ಕೋಟಿ ಅನುದಾನ ಬೇಡುವ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರ ಈ ವರ್ಷ‌‌ನೀಡಿರುವ ಅನುದಾನ ಕೇವಲ 50 ಲಕ್ಷ‌ ರುಪಾಯಿಗಳು. ಸಂಸ್ಥೆಯ‌ ಗುತ್ತಿಗೆ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದಷ್ಟು ವಿವಿ ಬಡವಾಗಿದೆ. ಹೀಗಿರುವಾಗ ಸಂಶೋಧನೆಯಂಥ ಕೆಲಸಗಳಿಗೆ ಹಣವೆಲ್ಲಿರಲು ಸಾಧ್ಯ?” ಎಂದು ಕರವೇ ರಾಜ್ಯಾಧ್ಯಕ್ಷರಾಗಿರುವ ಟಿ ಎ ನಾರಾಯಣಗೌಡ ಅವರು ಹೇಳಿದ್ದಾರೆ.

“ರಾಜ್ಯ ಸರ್ಕಾರದ ಬಳಿ ವೋಟ್ ಬ್ಯಾಂಕ್ ರಾಜಕಾರಣ‌ ನಡೆಸುವ ಉದ್ದೇಶದಿಂದ ಹೊಸಹೊಸ ಪ್ರಾಧಿಕಾರ ಸ್ಥಾಪಿಸಲು ಹಣವಿದೆ. ಆದರೆ ಏಕೈಕ ಕನ್ನಡ ವಿವಿಗೆ ಕೊಡಲು ಹಣವಿಲ್ಲವೆಂದರೆ ಹೇಗೆ? ಇದನ್ನು ನಾವು ಒಕ್ಕೊರಲಿನಿಂದ ಖಂಡಿಸಬೇಕಿದೆ. ನಾಳೆ (18-12-2020) ರಂದು ಸಂಜೆ ಕರ್ನಾಟಕ ರಕ್ಷಣಾ ವೇದಿಕೆ‌ ಟ್ವಿಟರ್ ಆಂದೋಲನ‌ ನಡೆಸುವುದರ ಜತೆಗೆ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲಿದೆ,” ಎಂದಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com