ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ

ಈ ಹೊಸ ಮಾರ್ಗಸೂಚಿಗಳು ಡಿಸೆಂಬರ್‌ 20, 2020ರಿಂದ ಜನವರಿ 2, 2021ರ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿವ ವಿಜಯ್‌ ಭಾಸ್ಕರ್‌ ಅವರು ಹೇಳಿದ್ದಾರೆ.
ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ

ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೇ, ರಾಜ್ಯ ಸರ್ಕಾರವು ಕೋವಿಡ್‌ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳ ಪ್ರಕಾರ ಡಿಸೆಂಬರ್‌ 20ರ ನಂತರ ರಾಜ್ಯದಲ್ಲಿ ಸಾಮೂಹಿಕ ಕೂಟಗಳನ್ನು ಏರ್ಪಡಿಸಲು ನಿರ್ಬಂಧ ಹೇರಲಾಗಿದೆ.

ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಆಚರಿಸಲು ಕರೆ ನೀಡಲಾಗಿದೆ. ಇದರೊಂದಿಗೆ ರಾಜ್ಯಾದ್ಯಂತ ಸಾಮೂಹಿಕ ಅಂತರವಿಲ್ಲದೇ ಜನರು ಸೇರುವಂತಹ ಕೂಟಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ವಸತಿ ಸಮುಚ್ಚಾಯಗಳಲ್ಲಿ ಆಯೋಜಿಸುವುದನ್ನು ನಿಷೇಧಿಸಲಾಗಿದೆ, ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹೊಸ ವರ್ಷಾಚರಣೆಯ ಸಂದರ್ಭ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅನುಮತಿ ನೀಡಲಾಗಿದೆ. ಇದರ ಹೊರತಾಗಿ, ಈ ಹಿಂದೆ ಜಾರಿಯಲ್ಲಿದ್ದ ಕೋವಿಡ್‌ ಮಾರ್ಗಸೂಚಿ ಯಥಾ ಪ್ರಕಾರ ಮುಂದುವರೆಯುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹೊಸ ಮಾರ್ಗಸೂಚಿಗಳು ಡಿಸೆಂಬರ್‌ 20, 2020ರಿಂದ ಜನವರಿ 2, 2021ರ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿವ ವಿಜಯ್‌ ಭಾಸ್ಕರ್‌ ಅವರು ಹೇಳಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com