ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಕೋವಿಡ್‌ ಪಾಸಿಟಿವ್;‌ ಆಸ್ಪತ್ರೆಗೆ ದಾಖಲು

ಸೋಮವಾರದಂದು ಮಂಜುನಾಥ ಪ್ರಸಾದ್‌ ಅವರಿಗೆ ಅಲ್ಪ ಪ್ರಮಾಣದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದರು.
ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಕೋವಿಡ್‌ ಪಾಸಿಟಿವ್;‌ ಆಸ್ಪತ್ರೆಗೆ ದಾಖಲು

ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಕರೋನಾ ಹಿನ್ನೆಲೆಯಲ್ಲಿ ಆಯುಕ್ತರು ನಗರದಾದ್ಯಂತ ಓಡಾಟ, ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದರು. ಹಾಗಾಗಿ ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕರೋನಾ ಪರೀಕ್ಷೆ ಒಳಗಾಗುವಂತೆ ಬಿಬಿಎಂಪಿ ಸಾರ್ವಜನಿಕರಲ್ಲಿ ಕೋರಿದೆ.

ಸೋಮವಾರದಂದು ಮಂಜುನಾಥ ಪ್ರಸಾದ್‌ ಅವರಿಗೆ ಅಲ್ಪ ಪ್ರಮಾಣದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದರು. ಮಂಗಳವಾರ ಬಂದ ಪರೀಕ್ಷಾ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಲ್ಲಿಗೆ ಆಸ್ಪತ್ರೆಯಲ್ಲಿ ಅವರು ದಾಖಲಾಗಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com