ಇಂದಿನಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿ: ಸಿಎಂ ಬಿಎಸ್‌ವೈ ಘೋಷಣೆ

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ.
ಇಂದಿನಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿ: ಸಿಎಂ ಬಿಎಸ್‌ವೈ ಘೋಷಣೆ

ಕ್ಷಿಪ್ರವಾಗಿ ಹರಡುತ್ತಿರುವ ಹೊಸ ಮಾದರಿಯ ಕರೊನಾ ವೈರಸ್ ಕಾರಣದಿಂದ ರಾಜ್ಯದಲ್ಲಿ ಬುಧವಾರದಿಂದ ಜನವರಿ 2ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೋವಿಡ್ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಮುಖ್ಯಮಂತ್ರಿ, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, 'ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ. ಇಡೀ ರಾಜ್ಯಕ್ಕೆ ಈ ಆದೇಶ ಅನ್ವಯವಾಗಲಿದೆ' ಎಂದು ಹೇಳಿದ್ದಾರೆ.

ಇಂದಿನಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿ: ಸಿಎಂ ಬಿಎಸ್‌ವೈ ಘೋಷಣೆ
ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಕರೋನಾ: ವಿಮಾನ ಸಂಚಾರ ನಿರ್ಬಂಧಿಸಿದ ಭಾರತ

ವಿದೇಶಗಳಿಂದ ಬರುವವರು ಆರ್ ಟಿ-ಪಿಸಿಆರ್ ವಿಧಾನದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ವರದಿ ಹೊಂದಿರಬೇಕು. ಹೊರಗೆ ಓಡಾಡುವಾಗ 72 ಗಂಟೆಗಳ ಅವಧಿಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ತಿಳಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com