ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ: ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ರೈತಪರ ,ಜನಪರ ಕಾಳಜಿಯುಳ್ಳ ವ್ಯಕ್ತಿ ಅಗಲಿರೋದು ಸಾರ್ವಜನಿಕ ಕ್ಷೇತ್ರಕ್ಕೆ ಅಪಾರ ನಷ್ಟ, ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ: ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಬಹಳ ನೋವುಂಟು ಮಾಡಿದೆ. ನನ್ನ ಆಪ್ತ ಸ್ನೇಹಿತ ಆತ, ಧರ್ಮೇಗೌಡರ ತಂದೆ ಎಸ್.ಆರ್ ಲಕ್ಷ್ಮಯ್ಯ ಕಾಲದಿಂದಲೂ ಕುಟುಂಬದ ಪರಿಚಯ ನನಗಿತ್ತು. ತಳಮಟ್ಟದಿಂದ ರಾಜಕರಣ ಮಾಡಿಕೊಂಡು ಬಂದವರು. ಜೊತೆಗೆ ಸಹಕಾರ ಕ್ಷೇತ್ರಗಳಲ್ಲಿ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ಅವರಿಗಿತ್ತು. ಧರ್ಮೇಗೌಡರು ಆತ್ಮಹತ್ಯೆಯ ನಿರ್ಧಾರ ತೆಗೆದುಕೊಳ್ಳಬಾರದಿತ್ತು ಎಂದು ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ರೈತಪರ ,ಜನಪರ ಕಾಳಜಿಯುಳ್ಳ ವ್ಯಕ್ತಿ ಅಗಲಿರೋದು ಸಾರ್ವಜನಿಕ ಕ್ಷೇತ್ರಕ್ಕೆ ಅಪಾರ ನಷ್ಟ, ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಕರೊನಾ ರೂಪಾಂತರ ಪತ್ತೆ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ರಾಜ್ಯಸರ್ಕಾರವು ಜನರಲ್ಲಿರುವ ಆತಂಕವನ್ನು ದೂರ ಮಾಡಬೇಕು. ಬ್ರಿಟನ್ ನಿಂದ ಬಂದ ಮೇಲೆ ಹುಡುಕೋದಲ್ಲ. ಬರುವ ಮೊದಲೇ ವಿಮಾನ ನಿಲ್ದಾಣ ದಲ್ಲಿ ಪರೀಕ್ಷೆ ಮಾಡಿ ,ಕ್ವಾರಂಟೈನ್ ಮಾಡಬೇಕಿತ್ತು ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ತಂದಿದ್ದಾರೆ. ಈ ವಿಚಾರ ಕುರಿತು ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚೆ ಮಾಡದೆ ಆತುರದ ನಿರ್ಧಾರ ಕೈಗೊಂಡಿದ್ದಾರೆಂದು ಸರ್ಕಾರ ವಿರುದ್ಧ ಆರೋಪ ಮಾಡಿದ್ದಾರೆ.

ಹೈನುಗಾರಿಕೆಯಲ್ಲಿ 42 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಭಾಗಿ ಆಗಿವೆ. ಈ ಕಾನೂನಿನಿಂದ ಇವರುಗಳಿಗೆ ತೊಂದರೆ ಆಗಲಿದೆ.ಕೃಷಿ ಕ್ಷೇತ್ರ ಮತ್ತು ಚರ್ಮ ಉದ್ಯಮ ಮೇಲೆ ಪರಿಣಾಮ ಬೀಳಲಿದೆ. ನಾವು ಹಾಕುವ ಚಪ್ಪಲಿಗಳು,ಹೆಣ್ಣುಮಕ್ಕಳ ವ್ಯಾನಿಟಿ ಬ್ಯಾಗ್ ಗಳು ಚರ್ಮದಿಂದ ಆಗೋದು. ಹಾಗಾಗಿ ಚರ್ಮೋದ್ಯಮದ ಮೇಲೆ ತೊಂದರೆ ಆಗಲಿದೆ ಎಂದಿದ್ದಾರೆ.

ಕುಮಾರಸ್ವಾಮಿಯವರ ಯಾವುದೇ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರ ಸುಳ್ಳುಗಳಿಗೆ ನಾನ್ಯಾಕೆ ರಿಯಾಕ್ಟ್ ಮಾಡಲಿ. ಅವರು ದುರುದ್ದೇಶಪೂರವಾಗಿ ಮಾತನಾಡುತ್ತಾರೆ. ಅದಕ್ಕೆಲ್ಲ ನಾನ್ಯಾಕೆ ರಿಯಾಕ್ಟ್ ಮಾಡಲಿ ಎಂದು ಪ್ರಶ್ನಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com