ಗ್ರಾಮ ಪಂಚಾಯಿತಿ ಚುನಾವಣೆ: 3,440 ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ

ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಗಳ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, 2.22 ಲಕ್ಷ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಗ್ರಾಮ ಪಂಚಾಯಿತಿ ಚುನಾವಣೆ: 3,440 
ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ

ಡಿ. 22 ಮತ್ತು ಡಿ. 27 ರಂದು ಎರಡು ಹಂತದಲ್ಲಿ ನಡೆಸಲಾದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ರಾಜ್ಯದ 226 ತಾಲೂಕುಗಳ 5,728 ಗ್ರಾಮಪಂಚಾಯಿತಿಯ 72,000 ಸ್ಥಾನಗಳಿಗೆ ಚುನಾವಣೆ ನಡೆಸಲಾಗಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಿದ್ದ 2.22 ಲಕ್ಷ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಈಗಾಗಲೇ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 3440 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಮುನ್ನಡೆಗೆ ಬಂದಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು‌ 1590 ಪಂಚಾಯಿತಿಗಳಲ್ಲಿ ಹಾಗೂ 600 ಕ್ಕೂ ಹೆಚ್ಚು ಪಂಚಾಯಿತಿಗಳಲ್ಲಿ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಬಾರಿ ಶೇಕಡಾ 80 ಕ್ಕೂ ಹೆಚ್ಚು ಮತದಾನವಾಗಿದ್ದು, 2,22,814 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ 8074 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಿ30 ಬುಧವಾರ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಸಂಜೆಯ ವೇಳೆಗೆ ಸಂಪೂರ್ಣ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಲ್ಲಿ ಮಾತ್ರ ಮತದಾನಕ್ಕೆ ಇವಿಎಂ ಬಳಕೆ ಮಾಡಲಾಗಿತ್ತು. ಉಳಿದೆಡೆ ಬ್ಯಾಲೆಟ್ ಪೇಪರ್ ಬಳಸಲಾಗಿದೆ. ಇದರಿಂದ ಮತ ಏಣಿಕೆ ಕಾರ್ಯ ನಿಧಾನವಾಗಿ ಸಾಗಿ ಫಲಿತಾಂಶದ ಪ್ರಕಟಣೆ ತಡರಾತ್ರಿ ಹೊರಬೀಳುವ ಸಾಧ್ಯತೆಯಿದೆ. ಜಿಲ್ಲೆಯ ತಾಲೂಕು ಪ್ರಧಾನ ಕಚೇರಿಯಲ್ಲಿ ಮತ ಏಣಿಕೆ ಕಾರ್ಯ ನಡೆಯುತ್ತಿದ್ದು, ಜಿಲ್ಲೆಯ ಉಪ ಆಯುಕ್ತ, ಜಿಲ್ಲಾ ಆಡಳಿತ ಮಂಡಳಿ ಅಧಿಕಾರಿಗಳು ಮತ ಎಣಿಕೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಪಕ್ಷಾತೀತ ಚುನಾವಣೆ ಆಗಿದ್ದರೂ ರಾಜ್ಯದಲ್ಲಿ ಗ್ರಾಮಮಟ್ಟದಲ್ಲಿ ನೆಲೆಗಟ್ಟಿಗೊಳಿಸಿಕೊಳ್ಳಲು ಪಕ್ಷಗಳು ಅಭ್ಯರ್ಥಿಗಳನ್ನು ಬೆಂಬಲಿಸಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಈ ಚುನಾವಣೆ ಫಲಿತಾಂಶ ಅತ್ಯಂತ ಮಹತ್ವದ್ದಾಗಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com