ಗ್ರಾಮೀಣ ಭಾಗದ ಪಕ್ಷದ ಕಾರ್ಯಕರ್ತರಿಗೆ ನಾನು ಚಿರಋಣಿ – ಹೆಚ್ ಡಿ ಕುಮಾರಸ್ವಾಮಿ

ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ ಎಂದು ಹೇಳಿದ ಅವರು ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಗ್ರಾಮೀಣ ಭಾಗದ ಪಕ್ಷದ ಕಾರ್ಯಕರ್ತರಿಗೆ  ನಾನು ಚಿರಋಣಿ – ಹೆಚ್ ಡಿ ಕುಮಾರಸ್ವಾಮಿ

ಈ ಬಾರಿಯ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷ ಸಂಘಟಿಸಿ ಪ್ರಚಾರ ಮಾಡುವಲ್ಲಿ ಹೆಚ್ಚಿನ ಶ್ರಮವಹಿಸಿ ಇವರುಗಳಿಗೆ ನಾನೆಂದಿಗೂ ಚಿರಖುಣಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ ಎಂದು ಹೇಳಿದ ಅವರು ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು, ಸೋತ ಅಭ್ಯರ್ಥಿಗಳು ಬೇಸರ ಪಡುವಂತಿಲ್ಲ, ಚುನಾವಣೆಯಲ್ಲಿ ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸದಾ ಇರಲಿದೆ. ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದ ಪಕ್ಷದ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ ಎಂದಿದ್ದಾರೆ.

ಗ್ರಾಮಮಟ್ಟದಿಂದಲೂ ಪಕ್ಷ ಸಂಘಟಿತ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿ. ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ. ಜೆಡಿಎಸ್ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಭಾಗದ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com