ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಪಿ. ರವಿಕುಮಾರ್ ನೇಮಕ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನಿವೃತ್ತಿಯಾಗುವ ಹಿನ್ನೆಲೆಯಲ್ಲಿ ಅವರ ಜಾಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಪಿ. ರವಿಕುಮಾರ್ ನೇಮಕ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಹಿರಿಯ IAS​ ಅಧಿಕಾರಿ ಪಿ. ರವಿಕುಮಾರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನಿವೃತ್ತಿಯಾಗುವ ಹಿನ್ನೆಲೆಯಲ್ಲಿ ಅವರ ಜಾಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಲವು IAS​ ಅಧಿಕಾರಿಗಳ ಹೆಸರು ಪಟ್ಟಿಯಲ್ಲಿದ್ದು, ಅವರಲ್ಲಿ ರವಿಕುಮಾರ್ ಹೆಸರು ಮುಂಚೂಣಿಯಲ್ಲಿತ್ತು ಎನ್ನಲಾಗಿದೆ.


1984ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ರವಿಕುಮಾರ್ ಕರ್ನಾಟಕ ಕೇಡರ್​ನಲ್ಲಿ ಎರಡನೇ ಅತಿ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಟಿಎಂ ವಿಜಯಭಾಸ್ಕರ್ ಗೆ ಬೀಳ್ಕೊಡುಗೆ
ಸೋಮವಾರದಂದು ವಿಧಾನಸೌಧದಲ್ಲಿ ಟಿಎಂ ವಿಜಯಭಾಸ್ಕರ್ ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೀಳ್ಕೊಡುಗೆ ನೀಡಿದ್ದಾರೆ. ಈ ವೇಳೆ ಹಲವು ಸಚಿವರು ಉಪಸ್ಥಿತರಿದ್ದರು.

ಇಂದು ವಿಜಯಭಾಸ್ಕರ್ ಅವರು ರವಿಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಕರ್ನಾಟಕದ ಅನೇಕ ಇಲಾಖೆಗಳಲ್ಲಿ ಸೇವೆ ಸಲ್ಲಿಸಿರುವ ರವಿಕುಮಾರ್ ಅವರು ರಾಜ್ಯದ 38ನೇ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ, ಸಹಕಾರ ಇಲಾಖೆ, ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್ ಸೇವೆ ಸಲ್ಲಿಸಿದ್ದರು. 2022ರ ಮೇ ತಿಂಗಳಲ್ಲಿ ರವಿಕುಮಾರ್ ಅವರ ಅಧಿಕಾರಾವಧಿ ಅಂತ್ಯವಾಗಲಿದೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com